ಕುಂದಾಪುರ: ಹಲವು ವರ್ಷಗಳಿಂದ ನಿರುಪಯುಕ್ತವಾಗಿದ್ದ ಬೃಹತ್ ನೀರಿನ ಟ್ಯಾಂಕ್‌ಅನ್ನು ತೆರವುಗೊಳಿಸುವ ಕಾರ್ಯಾಚರಣೆ ಕೋಟೇಶ್ವರ ಗ್ರಾಮ ಪಂಚಾಯತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ನಡೆಯಿತು. ಸತತ 9 ಗಂಟೆಗಳ ನಿರಂತರ ಕಾರ್ಯಾಚರಣೆಯಿಂದಾಗಿ ಟ್ಯಾಂಕ್ ನೆಲಕ್ಕುರುಳಿದ್ದು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.
ಕೋಟೇಶ್ವರ ಗ್ರಾಪಂ ಎದುರಿನ ಗ್ರಾಮಲೆಕ್ಕಿಗರ ಕೊಠಡಿ ಹಿಂಭಾಗದಲ್ಲಿ ಈ ಬೃಹತ್ ನೀರಿನ ಟ್ಯಾಂಕ್ ಇತ್ತು. 1986ರಲ್ಲಿ ನಿರ್ಮಾಣವಾದ 2 ಲಕ್ಷ ಲೀಟರ್ ಸಂಗ್ರಹ ಸಾಮರ್ಥ್ಯದ ಹೆಡ್‌ಟ್ಯಾಂಕ್‌ನಲ್ಲಿ ಸೋರಿಕೆ ಕಂಡುಬಂದಿದ್ದರಿಂದ ಕಳೆದ ಹದಿನೈದು ವರ್ಷಗಳಿಂದ ಯಾವುದೇ ಉಪಯೋಗವೂ ಇಲ್ಲದೇ ಇದು ನಿರುಪಯುಕ್ತವಾಗಿತ್ತು. ಟ್ಯಾಂಕ್ ಶಿಥಿಲಗೊಂಡಿದ್ದು ರಾಷ್ಟ್ರೀಯ ಹೆದ್ದಾರಿ ಹಾಗೂ ಗ್ರಾಪಂ ಕಟ್ಟಡ ಸಹಿತ ಇತರೆ ಅಂಗಡಿಗಳಿಗೆ ಅಪಾಯ ಇದ್ದ ಕಾರಣ, ಈ ಟ್ಯಾಂಕ್ ತೆರವಿಗೆ ಗ್ರಾಪಂ ಸದಸ್ಯರು ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯಿಂದ ಸಾಮರ್ಥ್ಯ ವರದಿ ಪಡೆದು ಟ್ಯಾಂಕ್ ಕೆಡವಲು ದಿನ ನಿಗದಿ ಮಾಡಿದ್ದರು. ಸುರತ್ಕಲ್ ಮೂಲದ 15-20 ಮಂದಿ ತಂಡ ತೆರವು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.
Kshetra Samachara
12/10/2022 02:51 pm