ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಫ್ಲೈ ಒವರ್ ಕಾಮಗಾರಿ ವೇಳೆ ಅನಾಹುತ: ಕುಸಿದು ಬಿದ್ದ ಕಬ್ಬಿಣದ ಸಲಾಕೆಗಳು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಲ್ಲಡ್ಕದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಲ್ಲಿ ಫ್ಲೈ ಒವರ್‌ಗಾಗಿ ಪಿಲ್ಲರ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಪಿಲ್ಲರ್ ನಿರ್ಮಾಣಕ್ಕಾಗಿ ಕಬ್ಬಿಣದ ಸಲಾಕೆಗಳನ್ನು ಜೋಡಿಸುವ ಕಾರ್ಯ ನಡೆಯುತ್ತಿದ್ದು ಕಬ್ಬಿಣದ ಸಲಾಕೆಗಳ ಸಂಪೂರ್ಣ ಭಾಗ ಕುಸಿದು ಬಿದ್ದಿದೆ.

ಘಟನೆ ವೇಳೆ ಯಾವುದೇ ವಾಹನ ಸಂಚಾರ ಇಲ್ಲದೆ ಇರುವುದರಿಂದ ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಮಳೆಯಿಂದಾಗಿ ಕೆಲ ಕಾಲ ನಿಧಾನಗತಿಯಲ್ಲಿ ಕಾಮಗಾರಿ ನಡೆಯುತ್ತಿತ್ತು.ಕಾಮಗಾರಿ ಅವೈಜ್ಞಾನಿಕ ರೀತಿಯಲ್ಲಿ ಸಾಗುತ್ತಿದೆ ಎಂಬ ಅರೋಪದ ಮಧ್ಯೆಯೂ ಈ ಘಟನೆ ನಡೆದಿದೆ. ಇದರಿಂದಾಗಿ ಸ್ಥಳೀಯರಲ್ಲಿ ಕಾಮಗಾರಿ ಗುಣಮಟ್ಟದ ಬಗ್ಗೆ ಅನುಮಾನ ಮೂಡಿದೆ ಎನ್ನಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

13/10/2022 07:06 pm

Cinque Terre

5.89 K

Cinque Terre

1

ಸಂಬಂಧಿತ ಸುದ್ದಿ