ಉಡುಪಿ: ಶ್ರಾವಣ ಮಾಸಾರಂಭದ ಹೊತ್ತಿಗೆ ಉಡುಪಿ ಜಿಲ್ಲೆಯ ಹರೀಶ್ ಬಂಗೇರ ಕುಟುಂಬದವರಿಗೆ ಮತ್ತು ಬಂಧು ಮಿತ್ರರಿಗೆ ಶುಭ ಸುದ್ದಿ ಬಂದಿದ್ದು ಇದೇ ಆಗಸ್ಟ್ 18 ರಂದು ಹರೀಶ್ ಬಂಗೇರ ಬೆಂಗಳೂರು ತಲುಪಲಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ.
ಹರೀಶ್ ಬಂಗೇರ ತಾಯ್ನಾಡಿಗೆ ಮರಳಲು ಪೂರೈಸಬೇಕಾಗಿದ್ದ ವಿಧಿ- ವಿಧಾನಗಳೆಲ್ಲವೂ ಪೂರ್ಣಗೊಂಡಿದ್ದು ಇದೇ ಆಗಸ್ಟ್ 17ರಂದು ಸೌದಿ ಅರೇಬಿಯಾದ ದಮಾಮ್ ವಿಮಾನ ನಿಲ್ದಾಣದಿಂದ ದೋಹಾ ಹೊರಟು ದೋಹಾ ಮೂಲಕ ಆಗಸ್ಟ್ 18 ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ಸೌದಿ ಅರೇಬಿಯಾದ ರಿಯಾದ್ ನಲ್ಲಿರುವ ಭಾರತೀಯ ದೂತವಾಸದಿಂದ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಧಿಕೃತ ಮಾಹಿತಿ ಬಂದಿದೆ ಎಂದವರು ತಿಳಿಸಿದ್ದಾರೆ.ಉಡುಪಿ ಜಿಲ್ಲೆಯವರಾದ ಹರೀಶ್ ಬಂಗೇರಾ ,ಫೇಸ್ ಬುಕ್ ನಲ್ಲಿ ಸೌದಿ ಅರೇಬಿಯಾದ ದೊರೆಯ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎಂಬ ಆರೋಪದಡಿ ಅಲ್ಲಿ ಜೈಲುಶಿಕ್ಷೆಗೆ ಗುರಿಯಾಗಿದ್ದರು.
Kshetra Samachara
14/08/2021 11:04 am