ಮಂಗಳೂರು: ಯುದ್ದಪೀಡಿತ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು ಇಂದು ಮಂಗಳೂರು ತಲುಪಿದ್ದಾರೆ.
ಮಂಗಳೂರಿನ ಕ್ಲೇಟನ್ ಓಸ್ಮಂಡ್ ಡಿಸೋಜಾ, ಅನೈನ ಅನಾ, ಅಹ್ಮದ್ ಸಾದ್ ಅರ್ಷದ್ ಹಾಗೂ ಮೂಡುಬಿದಿರೆಯ ಶಾಲ್ವಿನ್ ಪ್ರೀತಿ ಅರಾನ್ಹ ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಹೆತ್ತವರು, ಸಂಬಂಧಿಕರು ಮಕ್ಕಳನ್ನು ತಬ್ಬಿಕೊಂಡು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
PublicNext
07/03/2022 02:57 pm