ಉಡುಪಿ: ಉದ್ಯೋಗಾಕಾಂಕ್ಷಿಗಳು ತಮಗೆ ಆಸಕ್ತಿಯಿರುವ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದ್ದಾರೆ.ಅವರು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆ ಪ್ರಯುಕ್ತ ಆಯೋಜಿಸಿದ್ದ ಸಂಜೀವಿನಿ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರೂ ತಮ್ಮದೇ ಆದ ವಿಶಿಷ್ಟ ಮತ್ತು ವೈಶಿಷ್ಟ್ಯಪೂರ್ಣ ವ್ಯಕ್ತಿತ್ವ ಹಾಗೂ ಆಸಕ್ತಿಯನ್ನು ಹೊಂದಿದ್ದು ತಮಗೆ ಸರಿ ಹೊಂದುವ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯುವುದರಿಂದ ಆ ಉದ್ಯೋಗದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾದ್ಯವಾಗಲಿದೆ. ಕೋವಿಡ್‌ನಿಂದ ಅನೇಕ ಮಂದಿ ಉದ್ಯೋಗ ವಂಚಿತರಾಗಿದ್ದು ಉದ್ಯೋಗಾಕಾಂಕ್ಷಿಗಳು ಉದ್ಯೋಗಮೇಳದಲ್ಲಿ ಭಾಗವಹಿಸುವ ಕಂಪೆನಿಗಳಲ್ಲಿ ತಮ್ಮ ವಿದ್ಯಾರ್ಹತೆ ಮತ್ತು ಆಸಕ್ತಿಯಿರುವ ಕ್ಷೇತ್ರದ ಉದ್ಯೋಗಗಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಈ ಉದ್ಯೋಗ ಮೇಳದಲ್ಲಿ ಒಂಬೈನೂರಕ್ಕೂ ಹೆಚ್ಚು ಮಂದಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದು ,429 ಮಂದಿಗೆ ಆಫರ್ ಲೆಟರ್ ನೀಡಲಾಯಿತು. ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗದೀಶ್,ಜಿಲ್ಲಾ ಪಂಚಾಯತ್‌ನ ಗ್ರಾಮೀಣ ಜೀವನೋಪಾಯ ಅಭಿಯಾನದ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ , ಪ್ರಭಾಕರ ಆಚಾರ್ ಉಪಸ್ಥಿತರಿದ್ದರು.
Kshetra Samachara
03/01/2022 09:39 pm