ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಾ.3ರಂದು ಉದ್ಯೋಗ ಮೇಳ

ಮಂಗಳೂರು: ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಬೃಹತ್ ಉದ್ಯೋಗ ಮೇಳ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಸಚಿವರು, ಮಂಗಳೂರಿನ ಎಜೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾರ್ಚ್ 3ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದ್ದು, ನೂರಕ್ಕೂ ಅಧಿಕ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದೆ. ಪದವೀಧರರು, ಇಂಜಿನಿಯರಿಂಗ್, ಡಿಪ್ಲೋಮಾ ಪದವೀಧರರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಉದ್ಯೋಗ ಮೇಳಕ್ಕೆ ಬರುವಾಗ ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಮತ್ತು ಅಂಕಪಟ್ಟಿಯನ್ನು ಕಡ್ಡಾಯವಾಗಿ ತರಬೇಕು. ಸ್ಥಳದಲ್ಲೇ ನೋಂದಣಿ ಮಾಡಬಹುದಾಗಿದ್ದು, ಅರ್ಹ ಕಂಪೆನಿಗಳಿಗೆ ಉದ್ಯೋಗ ಅರ್ಜಿ ಸಲ್ಲಿಸಬಹುದಾಗಿದೆ. ಒರ್ವ ವಿದ್ಯಾರ್ಥಿ ಮೂರು ಕಂಪೆನಿಗಳಿಗೆ ಅರ್ಜಿ ಹಾಕಬಹುದು ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

Edited By : Vijay Kumar
Kshetra Samachara

Kshetra Samachara

27/02/2022 10:11 pm

Cinque Terre

4.84 K

Cinque Terre

1