ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬೀಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ

ಉಡುಪಿ: ಜಿಲ್ಲೆಯ ಬೀಡಿ ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ (ಸಿಐಟಿಯು) ಸೋಮವಾರ ಉಡುಪಿಯ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಅವರ ಮುಖಾಂತರ ಪ್ರಧಾನ ಮಂತ್ರಿ ಅವರಿಗೆ ಮನವಿ ಸಲ್ಲಿಸಿತು.

ಉಡುಪಿ ಜಿಲ್ಲೆಯಲ್ಲಿ ಸುಮಾರು ಒಂದು ಲಕ್ಷದಷ್ಟು ಬೀಡಿ ಕಾರ್ಮಿಕರು ದುಡಿಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಈ ಬಡ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.ಕೆಲವು ವರ್ಷಗಳ ಹಿಂದಿನವರೆಗೆ ಈ ಕಾರ್ಮಿಕರು ಬೀಡಿ ಕೆಲಸದಿಂದ ತಮ್ಮ ಮಕ್ಕಳ ವಿದ್ಯಾಭ್ಯಾಸ, ಮದುವೆ, ವಸತಿಗಳ ನಿರ್ಮಾಣ ಮಾಡಿಕೊಂಡು ಗೌರವ ದಿಂದ ಜೀವನ ಸಾಗಿಸುತಿದ್ದರು. ಆದರೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಬಂಡವಾಳಗಾರರ ಆಮಿಷಕ್ಕೆ ತಲೆಬಾಗಿ ಸರಕಾರ ಬೀಡಿ ಉದ್ಯಮ ನಶಿಸುವಂತೆ ಕಾನೂನು ರೂಪಿಸಿ ಲಕ್ಷಾಂತರ ಬೀಡಿ ಕಾರ್ಮಿಕರನ್ನು ಬೀದಿ ಪಾಲು ಮಾಡಲಾಗಿದೆ. ಬೀಡಿ ಕಾರ್ಮಿಕರಿಗೆ ಬದಲಿ ಉದ್ಯೋಗ ನೀಡದೇ, ಬೀಡಿ ಉದ್ಯಮವನ್ನು ಮುಚ್ಚಲು ಕಾನೂನು ತಂದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆದ್ದರಿಂದ ಬೀಡಿ ಕಾರ್ಮಿಕರಿಗೆ ಬದಿ ಉದ್ಯೋಗದ ವ್ಯವಸ್ಥೆ ಮಾಡಬೇಕು ಎಂದು ಹಕ್ಕೊತ್ತಾಯ ಮಾಡುತಿದ್ದೇವೆ. ಕೇಂದ್ರ ಸರಕಾರ ಬೀಡಿ ಕಾರ್ಮಿಕರ ಹಾಗೂ ಉದ್ಯಮದ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು. ಸರಕಾರದ ನೀತಿಗಳಿಂದ ನಿರುದ್ಯೋಗಿಗಳಾಗುತ್ತಿರುವ ಬೀಡಿ ಕಾರ್ಮಿಕರಿಗೆ ಸೂಕ್ತ ಪರಿಹಾರ ಅಥವಾ ಪರ್ಯಾಯ ಉದ್ಯೋಗ ನೀಡಬೇಕು. ಕಾನೂನು ಬಾಹಿರವಾಗಿ ನಡೆಯುತ್ತಿರುವ ಬೀಡಿ ಉತ್ಪಾದನೆಗೆ ತಕ್ಷಣ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

12/09/2022 08:03 pm

Cinque Terre

13.7 K

Cinque Terre

0