ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕುಂತಳನಗರದಲ್ಲಿ ಅ.8, 9 ರಂದು ಬೃಹತ್ ಉದ್ಯೋಗ ಮೇಳ

ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಡೆವಲಪ್ಮೆಂಟ್ ಸಮಿತಿ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ಬೃಹತ್ ಉದ್ಯೋಗ ಮೇಳ ಅ.8 ಮತ್ತು 9ರಂದು ಕುಂತಳ ನಗರದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಗ್ರಿ, ಡಿಪ್ಲೋಮ, ಐಟಿಐ, ಎಂಜಿನಿಯರಿಂಗ್, ಮ್ಯಾನೇಜ್‌ಮೆಂಟ್, ಚಾರ್ಟೆಡ್ ಅಕೌಂಟೆಂಟ್, ನರ್ಸಿಂಗ್ ಅಂತಿಮ ವರ್ಷದ ಪರೀಕ್ಷೆಗೆ ಕುಳಿತುಕೊಂಡುವರು ಈಗಾಗಲೇ ಓದಿದವರು ಅಥವಾ 2-3 ವರ್ಷ ಅನುಭವವುಳ್ಳವರಿಗೆ ಭಾಗವಹಿಸಲು ಅವಕಾಶವಿದೆ. ಸುಮಾರು 25ಕ್ಕಿಂತಲೂ ಅಧಿಕ ಒಳ್ಳೆಯ ಕಂಪನಿಗಳು ರಿಜಿಸ್ಟ್ರಾರ್ ಮಾಡಿದ್ದು, ತುಂಬಾ ಉದ್ಯೋಗದ ಅವಕಾಶಗಳಿವೆ ಎಂದು ಮಾಹಿತಿ ನೀಡಿದರು.

Edited By : Shivu K
Kshetra Samachara

Kshetra Samachara

06/10/2022 08:14 pm

Cinque Terre

4.36 K

Cinque Terre

0