ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಡಿವೈಡರ್ ದಾಟಿ ಕಾರು ಅಪಘಾತ ಕೇಸ್‌- ಆರೋಪಿ ಪೊಲೀಸ್ ಕಸ್ಟಡಿಗೆ

ಮಂಗಳೂರು: ಅತ್ಯಂತ ವೇಗವಾಗಿ, ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಬಂದು ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದು, ಮಹಿಳೆ ಹಾಗೂ ಮಗುವಿಗೆ ಅಪಘಾತಕ್ಕೆ ಕಾರಣನಾದ ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆತನನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಆರೋಪಿ ಶ್ರವಣ್ ಕುಮಾರ್ ಎ.9ರಂದು ನಗರದ ಬಲ್ಲಾಳ್ ಬಾಗ್ ಬಳಿ ಅತೀ ವೇಗದಿಂದ ಬಿಎಂಡಬ್ಲ್ಯು ಕಾರು ಚಲಾಯಿಸಿಕೊಂಡು ಬಂದಿದ್ದಾನೆ. ಪರಿಣಾಮ ಆತನ ನಿಯಂತ್ರಣಕ್ಕೆ ಸಿಗದ ಕಾರು ಡಿವೈಡರ್ ದಾಟಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಎರಡು ಕಾರು ಹಾಗೂ ಎರಡು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಮಹಿಳೆ ಹಾಗೂ ಏಳು ವರ್ಷದ ಓರ್ವ ಬಾಲಕ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿ ಶ್ರವಣ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಮಂಗಳೂರು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 279, 337, 338ರ ಅನ್ವಯ ಪ್ರಕರಣ ದಾಖಲಾಗಿದೆ.

ಅಲ್ಲದೆ ಆರೋಪಿ ಜನನಿಬಿಡ ಪ್ರದೇಶದಲ್ಲಿ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ್ದಾನೆ. ಆತನಿಗೆ ಇದು ಜನರ ಪ್ರಾಣಕ್ಕೆ ಕುತ್ತಾಗಬಹುದೆಂಬ ಅರಿವಿದ್ದರೂ, ವೇಗವಾಗಿ ಕಾರು ಚಲಾಯಿಸಿ ಇಬ್ಬರಿಗೆ ಗಂಭೀರ ಗಾಯಗೊಳಿಸಿರುವ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 308ರ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.

Edited By : Nagesh Gaonkar
PublicNext

PublicNext

11/04/2022 10:51 pm

Cinque Terre

62.16 K

Cinque Terre

2

ಸಂಬಂಧಿತ ಸುದ್ದಿ