ಹಳೆಯಂಗಡಿ : ರಾಷ್ಟ್ರೀಯ ಹೆದ್ದಾರಿ 66ರ ಹಳೆಯಗಡಿ ಜಂಕ್ಷನ್ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಮೃತ ಬೈಕ್ ಸವಾರನನ್ನು ಪಕ್ಷಿಕೆರೆ ಹೊಸಕಾಡುನಿವಾಸಿ ಚರಣ್ ರಾಜ್ ಶೆಟ್ಟಿಗಾರ್ (29) ಎಂದು ಗುರುತಿಸಲಾಗಿದೆ
ಗಾಯಾಳು ಬೈಕ್ ಸವಾರ ಸುರತ್ಕಲ್ ಕಡೆಯಿಂದ ಪಕ್ಷಿಕೆರೆಗೆ ಬೈಕ್ ನಲ್ಲಿ ಬರುತ್ತಿದ್ದು ಹಳೆಯಂಗಡಿ ಜಂಕ್ಷನ್ ಬಳಿ ಉಡುಪಿ ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರ ಚರಣ್ ರಾಜ್ ಶೆಟ್ಟಿಗಾರ್ ಟ್ಯಾಂಕರ್ ನ ಚಕ್ರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಇನ್ನು ಅಪಘಾತದ ನಡೆದ ಕೂಡಲೇ ಹೆದ್ದಾರಿಯಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಮೃತ ಬೈಕ್ ಸವಾರ ಚರಣ್ ರಾಜ್ ಸುರತ್ಕಲ್ ನಲ್ಲಿ ಗ್ರಾಫಿಕ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದು ಕಳೆದ ಒಂದುವರೆ ವರ್ಷದ ಹಿಂದೆ ವಿವಾಹವಾಗಿದ್ದು ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
PublicNext
13/09/2022 09:13 pm