ಕಾಪು: ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ನಂತರ ಬಂದ ನೆರೆಗೆ ಮಟ್ಟುಗುಳ್ಳ ಬೆಳೆ ಸಾಕಷ್ಟು ಹಾನಿಯಾಗಿದೆ.ಇದರಿಂದ ಬೆಳೆಗಾರರಿಗೆ ಸಾಕಷ್ಟು ನಷ್ಟ ಉಂಟಾಗಿದ್ದು ,ಬೆಳೆಗಾರರಿಗೆ ಪರಿಹಾರ ಪ್ಯಾಕೇಜ್ ನೀಡಲು ಪ್ರಯತ್ನಿಸುವುದಾಗಿ ಕಾಪು ಶಾಸಕ ಲಾಲಾಜಿ ಮೆಂಡನ್ ಹೇಳಿದ್ದಾರೆ.ಅವರು ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ವಿನಲ್ಲಿ ಬೆಳೆ ಹಾನಿ ಪರಿಶೀಲಿಸಿ ,ಬೆಳೆಗಾರರಿಂದ ಮನವಿ ಸ್ವೀಕರಿಸಿ ಈ ಭರವಸೆ ನೀಡಿದ್ದಾರೆ.
ನವರಾತ್ರಿಗೆ ಮಟ್ಟುಗುಳ್ಳ ಬೆಳೆ ಮಾರುಕಟ್ಟೆಗೆ ಬರಬೇಕಿತ್ತು.ಆದರೆ ಈ ವರ್ಷ ಭಾರೀ ಮಳೆಯಿಂದ ಬೆಳೆ ಹಾಳಾಗಿವೆ.ಈ ಸಂಬಂಧ ಅಧಿಕಾರಿಗಳ ಜೊತೆ ಮಾತನಾಡಿ ಗರಿಷ್ಠ ಪರಿಹಾರ ಪ್ಯಾಕೇಜ್ ನೀಡುವುದಾಗಿ ಹೇಳಿದರು.ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ, ಕೋಟೆ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಗಣೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
30/09/2020 10:01 am