ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳ ದಿಢೀರ್ ದಾಳಿ, ಪರಿಶೀಲನೆ

ಮಂಗಳೂರು: ಸರಕಾರದ ಅಧಿಸೂಚನೆ ಉಲ್ಲಂಘಿಸಿ ಹಸಿರು ಪಟಾಕಿ ಹೊರತು ಇನ್ನಿತರ ಪಟಾಕಿಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್, ಆರೋಗ್ಯ, ಕಂದಾಯ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ ಮಾಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ನೇತೃತ್ವದ ತಂಡಕ್ಕೆ ಹಸಿರು ಹೊರತುಪಡಿಸಿದ ಪಟಾಕಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಸುರತ್ಕಲ್, ಮಂಗಳೂರು, ಕೋಟೆಕಾರ್, ಉಳ್ಳಾಲ ಸಹಿತ ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ಕೂಡ ದಾಳಿ ನಡೆಸಿ ತಪಾಸಣೆ ನಡೆಸಲಾಗಿದೆ.

ಕಾರ್ಯಾಚರಣೆಯಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಡಿ. ಮಂಜು ರಾಜಣ್ಣ, ಮಂಗಳೂರು ಮನಪಾ ವಲಯ ಅಧಿಕಾರಿ ಯಶವಂತ್, ಆರೋಗ್ಯ ಇಲಾಖೆಯ ಅಧಿಕಾರಿ ಡಾ.ಎ.ಎಂ.ಶೆಟ್ಟಿ, ವಿವಿಧ ಇಲಾಖೆ ಅಧಿಕಾರಿಗಳಾದ ಅಕ್ಷತ್ ಮತ್ತು ರವೀಂದ್ರ, ಯಾಸ್ಮಿನ್, ಪ್ರಭಾಕರ್, ಎಸ್ಐ ಗಳಾದ ಜ್ಞಾನಶೇಖರ್, ಪ್ರದೀಪ್, ಕಲಾಶ್ರೀ ಪಾಲ್ಗೊಂಡಿದ್ದರು.

Edited By : Nagaraj Tulugeri
Kshetra Samachara

Kshetra Samachara

16/11/2020 07:22 pm

Cinque Terre

26.56 K

Cinque Terre

7

ಸಂಬಂಧಿತ ಸುದ್ದಿ