ಮಂಗಳೂರು: ಕೃಷಿ ತಿದ್ದುಪಡಿ ಕಾಯಿದೆ ವಿರೋಧಿಸಿ ಭಾರತ್ ಬಂದ್ ಗೆ ಮಂಗಳೂರಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿನಂತೆ ಬಸ್ ಸಂಚಾರ ಇದೆ. ಆದರೆ ಬಂದ್ ಗೆ ನೈತಿಕ ಬೆಂಬಲವಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ. ಅಲ್ಲದೇ ಮಂಗಳೂರು ಸರ್ಕಲ್ ಬಳಿ ರೈತರನ್ನು ಬೆಂಬಲಿಸಿ ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಸೇರಿದಂತೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಿವೆ.
Kshetra Samachara
08/12/2020 08:56 am