ಉಡುಪಿ: ಉಡುಪಿಯಲ್ಲಿ ವೀಕೆಂಡ್ ಲಾಕ್ ಡೌನ್ ಇದ್ದು ,ಜಿಲ್ಲೆ ಬಹುತೇಕ ಸ್ತಬ್ಧಗೊಂಡಿದೆ. ಇವತ್ತು ನಗರದ ಖಾಸಗಿ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಖಾಲಿ ಹೊಡೆಯುತ್ತಿದೆ.ಹೀಗಾಗಿ ಬಸ್ ನಿಲ್ದಾಣದಲ್ಲಿ ಬಸ್ ಚಾಲಕರು, ನಿರ್ವಾಹಕರು ಕಬಡ್ಡಿ ಆಟವಾಡಿದ ಪ್ರಸಂಗ ನಡೆಯಿತು.ಬಸ್ ಗಳಿದ್ದರೂ ವಾರಾಂತ್ಯದ ಕರ್ಫ್ಯೂನಿಂದಾಗಿ ಪ್ರಯಾಣಿಕರಿಲ್ಲದೆ ಬಸ್‌ಗಳು ಖಾಲಿ ಖಾಲಿಯಾಗಿವೆ.ಈ ಹಿನ್ನೆಲೆಯಲ್ಲಿ ಟೈಮ್ ಪಾಸ್ ಮಾಡುವುದಕ್ಕಾಗಿ ಖಾಸಗಿ ಬಸ್ ಸಿಬ್ಬಂದಿ ಬಸ್ ನಿಲ್ದಾಣದಲ್ಲೇ ಕಬಡ್ಡಿ ಆಟವಾಡಿ ಖುಷಿ ಪಟ್ಟರು!
Kshetra Samachara
05/09/2021 12:54 pm