ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಕೋವಿಡ್ ಪ್ರಕರಣ ಹೆಚ್ಚಳ: ಜಿಲ್ಲೆಯ ಗಡಿಯಲ್ಲಿ ಬಿಗಿ ಬಂದೋಬಸ್ತ್

ಬೈಂದೂರು: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲೆಯ ವಾಹನಗಳನ್ನು ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಈ ಹಿನ್ನಲೆಯಲ್ಲಿ ಉಡುಪಿ - ಉತ್ತರಕನ್ನಡ ಜಿಲ್ಲೆಯ ಗಡಿ ಭಾಗವಾದ ಶಿರೂರಿನಲ್ಲಿ ಪೊಲೀಸರು ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದ್ದಾರೆ .ಶಿರೂರು ಚೆಕ್ ಪೋಸ್ಟ್ ನಲ್ಲಿ ಬ್ಯಾರಿಕೇಡ್ ಅಳವಡಿಸಿದ ಪೊಲೀಸರು ಅತ್ತಿಂದಿತ್ತ ಸಂಚರಿಸುವವರ ಮೇಲೆ ನಿಗಾ ಇರಿಸಲಾಗಿದೆ.ಹೆದ್ದಾರಿ ಗಡಿಯಲ್ಲಿ ಅನವಶ್ಯಕ ಒಡಾಟ ಮಾಡುವ ವಾಹನ‌ ಸವಾರರನ್ನು ತಡೆದ ಪೊಲೀಸರು ಎಚ್ಚರಿಕೆ ನೀಡಿ ಕಳಿಸಿದ ಪ್ರಸಂಗ ನಡೆಯಿತು.ಜಿಲ್ಲೆಯ ಗಡಿಭಾಗಗಳ್ಲಿ ಹತ್ತಕ್ಕೂ ಹೆಚ್ಚು ಕಡೆ ಪೊಲೀಸರು ಚೆಕ್ ಪೋಸ್ಟ್ ಹಾಕಿದ್ದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ನೇತ್ರತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Edited By : Shivu K
Kshetra Samachara

Kshetra Samachara

10/01/2022 11:18 am

Cinque Terre

10.08 K

Cinque Terre

1

ಸಂಬಂಧಿತ ಸುದ್ದಿ