ಮುಲ್ಕಿ: ಮುಲ್ಕಿ ನಗರ ಪಂಚಾಯತ್ ಸಭಾಭವನದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ಪಟ್ಟಣ ಮಾರಾಟ ಸಮಿತಿ ಸದಸ್ಯರಿಗೆ ಅಧಿನಿಯಮ ಮತ್ತು ಯೋಜನೆಗಳ ಕುರಿತು ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಪಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮುಲ್ಕಿ ನಪಂ ಮುಖ್ಯಾಧಿಕಾರಿ ಚಂದ್ರಪೂಜಾರಿ ಮಾತನಾಡಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿಗೆ ಸರಕಾರದ ಅನೇಕ ಸವಲತ್ತುಗಳನ್ನು ಒದಗಿಸಿದ್ದು ಕಾರ್ಯರೂಪಕ್ಕೆ ತರಲಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಭಾಸ್ಕರ ಹೆಗ್ದೆ ಬೀದಿ ಬದಿ ವ್ಯಾಪಾರಿಗಳ ಜೀವನ ನಿರ್ವಹಣೆ ಹಾಗೂ ವ್ಯವಹಾರಗಳ ಕುರಿತು ಮಾಹಿತಿ ನೀಡಿದರು.
ಮುಲ್ಕಿ ಪೊಲೀಸ್ ಠಾಣಾಧಿಕಾರಿ ಕುಸುಮಾಧರ ಬೀದಿ ಬದಿ ವ್ಯಾಪಾರಿಗಳು ರಸ್ತೆ ಸುರಕ್ಷತೆ ಬಗ್ಗೆ ಕೈಗೊಳ್ಳಬೇಕಾದ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಲತೇಶ್ ರವರು ಮಂಗಳೂರು ಆರ್ಥಿಕ ಭದ್ರತೆ ಬಗ್ಗೆ ಮಾಹಿತಿ ನೀಡಿದರು ವೇದಿಕೆಯಲ್ಲಿ ಮುಖ್ಯಅತಿಥಿಗಳಾಗಿ ಮುಲ್ಕಿ ನಪಂ ಸದಸ್ಯರಾದ ಪುತ್ತುಬಾವ, ರಾಧಿಕಾ, ಶಾಂತ, ಲಕ್ಷ್ಮಿ, ಅಭಿಯಾನದ ವ್ಯವಸ್ಥಾಪಕಿ ಐರಿನ್, ಸಮುದಾಯ ಸಂಘಟನಾಧಿಕಾರಿ ಮತ್ತಾಡಿ, ಮುಲ್ಕಿ ಬೀದಿಬದಿ ವ್ಯಾಪಾರಿಗಳ ಸಂಘಟನೆಯ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ, ಜಯರಾಮ್, ಅಕ್ಬರ್ ಮತ್ತಿತರರು ಉಪಸ್ಥಿತರಿದ್ದರು. ಭರತಾಂಜಲಿ ನಿರೂಪಿಸಿದರು.
Kshetra Samachara
17/01/2022 02:37 pm