ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ; ಕಾನೂನು ಅರಿವು- ನೆರವು ಕಾರ್ಯಕ್ರಮ

ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ-ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಅಭಿಯೋಗ ಮತ್ತು ಸರ್ಕಾರಿ ವಾಣಿಜ್ಯಗಳ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಾರಿಗೆ ಇಲಾಖೆ, ಕಾನೂನು ವಿಶ್ವ ವಿದ್ಯಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಅರಣ್ಯ ಇಲಾಖೆ ಉಡುಪಿ ಮತ್ತು ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯಗಳೊಂದಿಗೆ, 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕಾನೂನು ಅರಿವು- ನೆರವು ಕಾರ್ಯಕ್ರಮ ಉಡುಪಿ ಕೊರ್ಟಿನ ಆವರಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಚಾಲನೆ ನೀಡಿದರು. ಜಾಥವು ಅಜ್ಜರಾಕಾಡು ಉದ್ಯಾನವನದ ವರೆಗೆ ಸಾಗಿತು.

ಕಾರ್ಯಕ್ರಮದಲ್ಲಿ ಹಿರಿಯ ವಕೀಲೆ ಅಮೃತಕಲಾ, ಆಶ್ರಯದಾತ ಆಟೋ ಯುನಿಯನ್ ಗೌರವ ಸಲಹೆಗಾರ ಶ್ರೀ ಶೇಖರ್ ಜತ್ತನ್, ಹಾಗೂ ಶಿವಪ್ರಸಾದ್ ಶೆಟ್ಟಿ, ಮತ್ತು ಸಂಘದ ಪದಾಧಿಕಾರಿಗಳು, ಯುವ ವಕೀಲರು, ಕಾನೂನು ಸ್ವಯಂಸೇವಕರಾದ ಡಾ. ಲೀನಾ ಜೋಸೆಫ್ ರೆಬೆಲ್ಲೊ, ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ಕೆ.ಬಾಲಗಂಗಾಧರ ರಾವ್ ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

02/10/2021 06:01 pm

Cinque Terre

6.89 K

Cinque Terre

0