ಮಂಗಳೂರು : ಡ್ರಗ್ಸ್ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ಡ್ಯಾನ್ಸರ್ ಸೇರಿ ಇಬ್ಬರನ್ನು ಬಂಧಿಸಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್, ಇಂದು ಬೆಳಗಿನ ಜಾವ ಮಂಗಳೂರು ನಗರದ ಕದ್ರಿ ಪದವು ಪರಿಸರದಲ್ಲಿ ಡ್ಯಾನ್ಸರ್ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಬಂಧಿತರನ್ನು ಮಂಗಳೂರು ಸುರತ್ಕಲ್ ಕಾನ ನಿವಾಸಿ ಅಕೀಲ್ ನೌಶೀಲ್ ಹಾಗೂ ಕುಳಾಯಿ ನಿವಾಸಿ ಕಿಶೋರ್ ಅಮನ್ ಶೆಟ್ಟಿ ಎಂದು ಗುರುತಿಸಲಾಗಿದೆ. ಮಂಗಳೂರು ಸಿಸಿಬಿ ಪೊಲೀಸರು, ಇಕಾನಾಮಿಕ್ &ನಾರ್ಕೋಟಿಕ್ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ನಿಷೇಧಿತ ಮಾದಕ ವಸ್ತು MDMA ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ. MDMA ಪೌಡರ್,ಬೈಕ್,2 ಮೊಬೈಲ್ ಫೋನ್ ಸೇರಿದಂತೆ 1 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಇನ್ನು ಕೆಲ ಆರೋಪಿಗಳಿದ್ದಾರೆ. ಇವರ ಚೈನ್ ಲಿಂಕ್ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ. ಮುಂಬೈಯಿಂದ ವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಇಬ್ಬರ ಮೇಲೆ ಸೇವನೆ ಮತ್ತು ಮಾರಾಟ ಎರಡು ಪ್ರಕರಣ ದಾಖಲಿಸಿದ್ದೇವೆ ಎಂದ ಅವ್ರು ಆರೋಪಿ ಅಕೀಲ್ ನೌಶೀಲ್ ಈ ಹಿಂದೆ ವಿದೇಶದಲ್ಲಿ ಸೇಫ್ಟಿ ಆಫೀಸರ್ ಆಗಿದ್ದ. ಒಂದು ವರ್ಷದ ಹಿಂದೆ ಅಕೀಲ್ ಊರಿಗೆ ಬಂದಿದ್ದ. ಕಿಶೋರ್ ಅಮನ್ ಶೆಟ್ಟಿ ಡ್ಯಾನ್ಸರ್, ಕೋರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ. ಅಕೀಲ್ ನೌಶೀಲ್ ಜೊತೆ ಸೇರಿ ಮಾದಕ ವಸ್ತು ಖರೀದಿಸಿ ಮಾರಾಟ ಮಾಡುತ್ತಿದ್ದ. ಬೆಂಗಳೂರು, ಮುಂಬೈಯಿಂದ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.
ಆರೋಪಿಗಳು ಮುಂಬೈಯಿಂದ ವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಇಬ್ಬರ ಮೇಲೆ ಸೇವನೆ ಮತ್ತು ಮಾರಾಟ ಎರಡೂ ಪ್ರಕರಣ ದಾಖಲಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
Kshetra Samachara
19/09/2020 03:09 pm