ಕಾಪು: ʼಹಿಜಾಬ್ʼ ಕುರಿತಾಗಿ ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಬುಧವಾರ ರಾಜ್ಯಾದ್ಯಂತ ಕಾಲೇಜುಗಳು ಮತ್ತೆ ಆರಂಭಗೊಂಡಿದ್ದು, ಕಾಪು ತಾಲೂಕಿನಲ್ಲಿ ಉತ್ತಮ ಸ್ಪಂದನೆ ದೊರಕಿದೆ.
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು, ಪೊಲಿಪು ಜೂನಿಯರ್ ಕಾಲೇಜು ಸಹಿತವಾಗಿ ವಿವಿಧ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಡಿ.ಸಿ., ಸರಕಾರದ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ಕಾಲೇಜುಗಳನ್ನು ಪ್ರಾರಂಭಿಸಲಾಗಿದ್ದು, ಎಲ್ಲಿಯೂ ಗೊಂದಲಗಳಿಲ್ಲದೆ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುತ್ತಿದ್ದಾರೆ. ಜಿಲ್ಲೆಯ ವಿವಿಧೆಡೆ ತೆರಳಿ, ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಜತೆಗಿದ್ದರು. ವೃತ್ತ ನಿರೀಕ್ಷಕ ಪ್ರಕಾಶ್, ಎಸ್ಸೈ ರಾಘವೇಂದ್ರ ಸಿ., ಕ್ರೈಂ ಎಸ್ಸೈ ತಿಮ್ಮೇಶ್ ಬಿ.ಎನ್. ನೇತೃತ್ವದಲ್ಲಿ ಶಾಲಾ- ಕಾಲೇಜುಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
Kshetra Samachara
16/02/2022 02:45 pm