ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲೆ ಆರಂಭ ಹಿನ್ನೆಲೆ: ನಾಳೆಯಿಂದ ಉಡುಪಿ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ!

ಉಡುಪಿ: ಉಡುಪಿಯಲ್ಲಿ ಆರಂಭ ವಾದ ಹಿಜಾಬ್ ಕೇಸರಿ ಕಿಚ್ಚು ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.ನಾಳೆಯಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಫೆ.14 ರಿಂದ 19 ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, ಮೆರವಣಿಗೆ ,ಪರ ವಿರುದ್ಧ ಘೋಷಣೆ ಕೂಗುವಂತಿಲ್ಲ. ಯಾವುದೇ ವ್ಯಕ್ತಿ, ಜಾತಿ ಧರ್ಮದ ವಿರುದ್ದ ನಡೆದುಕೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Edited By : Nirmala Aralikatti
PublicNext

PublicNext

13/02/2022 09:14 am

Cinque Terre

33.39 K

Cinque Terre

0

ಸಂಬಂಧಿತ ಸುದ್ದಿ