ಉಡುಪಿ: ರಾಜ್ಯ ಸರಕಾರವು ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಹತ್ತನೇ ತರಗತಿಯಿಂದ ಕೈಬಿಟ್ಟು ಮಕ್ಕಳಿಗೆ ಐಚ್ಛಿಕವಾಗಿ ನೀಡುವುದಾಗಿ ಹೇಳಿದೆ. ಇದು ಸರಿಯಲ್ಲ. ಅದನ್ನು ಎಲ್ಲ ಮಕ್ಕಳೂ ಈ ಹಿಂದಿನಂತೆಯೇ ಓದುವಂತಾಗಬೇಕು ಎಂದು ನಾರಾಯಣಗುರು ವಿಚಾರ ವೇದಿಕೆ ಜಿಲ್ಲಾಧ್ಯಕ್ಷ, ಜಗನ್ನಾಥ್ ಕೋಟೆ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಮೂರನೇ ಅತಿ ದೊಡ್ಡ ಜನಸಂಖ್ಯೆಯನ್ನು ನಾವು ಹೊಂದಿದ್ದೇವೆ. ಬ್ರಹ್ಮಶ್ರೀ ನಾರಾಯಣಗುರು ನಿಗಮ ಸ್ಥಾಪನೆ ಮಾಡಬೇಕು ಎಂಬ ಬೇಡಿಕೆಯನ್ನೂ ಸರಕಾರದ ಮುಂದಿಟ್ಟಿದ್ದೇವೆ. ಆದರೆ ಸರಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಪಠ್ಯ ಕೈಬಿಟ್ಟ ವಿಷಯವಾಗಿ ಈಗಾಗಲೇ ರಾಜ್ಯಾದ್ಯಂತ ಹೋರಾಟ ಮಾಡಿದ್ದೇವೆ. ಸರಕಾರ ಈ ತಪ್ಪನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಅವರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Kshetra Samachara
06/07/2022 06:46 pm