ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೆ.2 ಪ್ರಧಾನಿ ಮೋದಿ ಮಂಗಳೂರಿಗೆ: ಶಾಲಾ ಕಾಲೇಜಿಗೆ ರಜೆ

ಮಂಗಳೂರು: ಪ್ರಧಾನಿ ಮೋದಿಯವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದೇ ದಿನ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮವೂ ಇರುವುದರಿಂದ ಅಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸೆ.2ರಂದು ಸಾರ್ವಜನಿಕ ಗಣೇಶೋತ್ಸವದ ಮೂರನೇ ದಿನವಾದ ಅಂದು ನಗರದ ಹೆಚ್ಚಿನ ಕಡೆ ಸಾರ್ವಜನಿಕ ಗಣೇಶೋತ್ಸವದ ಶೋಭಯಾತ್ರೆ, ಗಣಪತಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಗಣಪತಿ ವಿಸರ್ಜನೆಯ ಶೋಭಯಾತ್ರೆಯ ಕಾರ್ಯಕ್ರಮದಿಂದ ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ಮಕ್ಕಳ ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ ಅಂದು ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.‌

ಆದ್ದರಿಂದ ಸೆ.2ರಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ, ಸ್ನಾತಕೋತ್ತರ ಪದವಿ , ಡಿಪ್ಲೊಮಾ , ಐಟಿಐ ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆ ಗಳಿಗೆ ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಈ ರಜೆ ನೀಡಿರುವ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವಜನಿಕ ರಜಾ ದಿನಗಳಂದು ಸರಿದೂಗಿಸಿ ನಿರ್ವಹಿಸುವಂತೆ ಸೂಚಿಸಲಾಗಿದೆ.

Edited By : Nagaraj Tulugeri
PublicNext

PublicNext

30/08/2022 05:18 pm

Cinque Terre

19.01 K

Cinque Terre

0

ಸಂಬಂಧಿತ ಸುದ್ದಿ