ಕುಂದಾಪುರ: ʼಹಿಜಾಬ್ʼ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಕಾಲೇಜುಗಳ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು. ಪೊಲೀಸ್ ಇಲಾಖೆ ಹೆಚ್ಚಿನ ಭದ್ರತೆ ನೀಡಿದೆ. ಸದ್ಯ, ಶಾಲಾ- ಕಾಲೇಜುಗಳಲ್ಲಿ ಶಾಂತಿಯ ವಾತಾವರಣ ಇದೆ ಎಂದು ಉಡುಪಿ ಜಿಲ್ಲಾ ಎ.ಸಿ. ರಾಜು ತಿಳಿಸಿದ್ದಾರೆ. ಕುಂದಾಪುರದಲ್ಲಿ ಮಾತನಾಡಿದ ಅವರು, ಕೋರ್ಟ್ ಆದೇಶವನ್ನು ನಾವು ಪಾಲಿಸುತ್ತಿದ್ದೇವೆ. ಶಾಂತಿ ಕಾಪಾಡುವುದೇ ನಮ್ಮ ಗುರಿ ಎಂದರು.
Kshetra Samachara
16/02/2022 05:10 pm