ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಗಿಯದ ಹಿಜಾಬ್ ಗೊಂದಲ

ಕಾಪು: ಹೈಕೋರ್ಟ್ ಆದೇಶದ ಬಳಿಕವೂ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿದಿದೆ.

ಬುಧವಾರ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು 9 ಮಂದಿ ವಿದ್ಯಾರ್ಥಿನಿಯರು ಕಾಲೇಜಿಗೆ‌ ಆಗಮಿಸಿದ್ದು ಪ್ರಾಂಶುಪಾಲರು ಹಿಜಾಬ್ ಸಹಿತವಾಗಿ ತರಗತಿ ಪ್ರವೇಶಿಸಲು ಅವಕಾಶವಿಲ್ಲ ಎಂದು ತಿಳಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿನಿಂದ ವಾಪಸ್ಸಾಗಿದ್ದಾರೆ.

ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರನ್ನು ಮನವೊಲಿಸಲು ಪ್ರಯತ್ನಿಸಲಾಯಿತಾದರೂ, ಯಾವುದಕ್ಕೂ ಒಪ್ಪದ ಕಾರಣ ಅವರಿಗೆ ತರಗತಿ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಅನಿಲ್ ಕುಮಾರ್ ತಿಳಿಸಿದ್ದಾರೆ.

ಹಿಜಾಬ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಪರೀಕ್ಷೆಯೂ ಬೇಕು, ಹಿಜಾಬ್ ಕೂಡಾ ಬೇಕು. ಹಿಜಾಬ್ ಬಗ್ಗೆ ಹಿಂದಿನಿಂದ ಇರದ ಸಮಸ್ಯೆ ಈಗ ಕಾಣಿಸಿಕೊಂಡಿರುವುದು ಬೇಸರ ಮೂಡಿಸಿದೆ. ಪ್ರಾಂಶುಪಾಲರು ನಮಗೆ‌ ನ್ಯಾಯ ದೊರಕಿಸಿಕೊಡುತ್ತಾರೆಂಬ ನಿರೀಕ್ಷೆಯಲ್ಲಿದ್ದೇವೆ ಎಂದು ವಿದ್ಯಾರ್ಥಿನಿಯರಾದ ರಿಜಾನಾ ಮತ್ತು ಶೆಹನಾಜ್ ತಿಳಿಸಿದ್ದಾರೆ.

Edited By : Manjunath H D
PublicNext

PublicNext

16/03/2022 03:48 pm

Cinque Terre

43.62 K

Cinque Terre

24

ಸಂಬಂಧಿತ ಸುದ್ದಿ