ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ :ಜಿಲ್ಲೆಯ ಹಲವೆಡೆ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ತರಗತಿಗೆ ಗೈರು!

ಉಡುಪಿ: ಹಿಜಾಬ್ ಕುರಿತು ಹೈಕೋರ್ಟ್ ನಿನ್ನೆ ತನ್ನ ತೀರ್ಪನ್ನು‌ ಪ್ರಕಟಿಸಿದೆ. ಇಂದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಆರಂಭಗೊಂಡಿದ್ದು, ವಿದ್ಯಾರ್ಥಿನಿಯರು ಕಾಲೇಜು ಆವರಣದೊಳಗೆ ಬುರ್ಕಾ, ಹಿಜಾಬ್‌ನೊಂದಿಗೆ ಆಗಮಿಸಿ ತರಗತಿಯೊಳಗೆ ಹಿಜಾಬ್ ತೆಗೆದಿರಿಸಿ ತೆರಳಿದರು.

ಆದರೆ, ಹಿಜಾಬ್ ಹಾಕದೆ ತರಗತಿಗೆ ಹೋಗಲು ಒಪ್ಪದ ಹೈಕೋರ್ಟ್ ಅರ್ಜಿದಾರರಾದ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆರು ವಿದ್ಯಾರ್ಥಿನಿಯರು ಹಾಗೂ ಉಡುಪಿ ಎಂಜಿಎಂ, ಅಜ್ಜರಕಾಡು ಜಿ.ಶಂಕರ್ ಸರಕಾರಿ ಪದವಿ ಕಾಲೇಜು, ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜು ಸೇರಿದಂತೆ ಹಲವು ವಿದ್ಯಾರ್ಥಿನಿಯರು ಗೈರು ಹಾಜರಾದ ಬಗ್ಗೆ ವರದಿಯಾಗಿದೆ.

ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿಯೂ ಬಹುತೇಕ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ತರಗತಿಗೆ ಗೈರು ಹಾಜರಾಗಿದ್ದಾರೆಂದು ತಿಳಿದು ಬಂದಿದೆ. ಕಾಲೇಜು ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.

Edited By : Manjunath H D
PublicNext

PublicNext

16/03/2022 07:22 pm

Cinque Terre

63.26 K

Cinque Terre

75

ಸಂಬಂಧಿತ ಸುದ್ದಿ