ಕುಂದಾಪುರ: ದೇಶದ ನಾಗರಿಕರಾಗಿ ನಮಗೆ ಲಭ್ಯವಿರುವ ಹಕ್ಕುಗಳ ಅರಿವು ಹೊಂದಿರಬೇಕಾದದ್ದು ನಮ್ಮ ಜವಾಬ್ದಾರಿ. ಮಾಹಿತಿ ಹಕ್ಕು ಕಾಯಿದೆ ಮತ್ತು ಕೇಂದ್ರ ವಿಚಕ್ಷಣಾ ಆಯೋಗವನ್ನು ಸಮರ್ಥವಾಗಿ ಬಳಸಿಕೊಂಡಲ್ಲಿ ಖಂಡಿತವಾಗಿಯೂ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸಬಲ್ಲದು ಎಂದು ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ನಡೆದ ಆರ್ ಟಿಐ ಮತ್ತು ಸಿವಿಸಿ ಕುರಿತ ಅರಿವು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಇನ್ನಿತರ ಸಾಮಾನ್ಯ ಕಾಯ್ದೆಗಳ ಬಗೆಗಿನ ಅರಿವು ಮತ್ತದರ ಬಳಕೆಯಿಂದ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚುವುದರ ಜೊತೆಗೆ ವಿಶೇಷವಾಗಿ ಸರಕಾರಿ ವಲಯಗಳಲ್ಲಿನ ಕಾರ್ಯಗಳಲ್ಲಿ ಧನಾತ್ಮಕ ಬದಲಾವಣೆ ನಿರೀಕ್ಷಿಸಲು ಸಾಧ್ಯ ಎಂದರು.
ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ್ರಿನ್ಸಿಪಾಲ್ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಶ್ರೇಯಾ ಎನ್. ಖಾರ್ವಿ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ. ನಿರ್ವಹಿಸಿದರು. ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ ವಂದಿಸಿದರು.
Kshetra Samachara
20/12/2021 03:33 pm