ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ವಿದ್ಯಾರ್ಥಿಗಳು ಹಿಜಾಬ್ ಬಗ್ಗೆ ಚಿಂತಿಸದೆ ಎಸ್ಸೆಸೆಲ್ಸಿ ಪರೀಕ್ಷೆ ಬರೆಯಿರಿ"

ಮಂಗಳೂರು: ವಿದ್ಯಾರ್ಥಿಗಳು ಹಿಜಾಬ್ ಕುರಿತು ಆಲೋಚನೆ ಮಾಡದೆ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದು ಉತ್ತಮ ಅಂಕ ಗಳಿಸಿ ಉತ್ತೀರ್ಣರಾಗಿ ಎಂದು ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕಿವಿಮಾತು ಹೇಳಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಖಾದರ್, ಸರಕಾರಿ ಶಾಲೆಗಳಲ್ಲಿ ಯಾವ ಆದೇಶ ಮಾಡಲಾಗಿದೆಯೋ ಅದನ್ನು ಗೌರವಿಸಿ ವಿದ್ಯಾರ್ಥಿನಿಯರು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಬೇಕು.

ಖಾಸಗಿ ಶಾಲೆಗಳಲ್ಲಿ ಅಲ್ಲಿನ ಆಡಳಿತ ಮಂಡಳಿಯ ವಿವೇಚನೆಗೆ ಈ ವಿಚಾರವನ್ನು ಬಿಡಲಾಗಿದೆ. ವಿದ್ಯಾರ್ಥಿ - ವಿದ್ಯಾರ್ಥಿನಿಯರು ಯಾವುದೇ ಮಾನಸಿಕ ಒತ್ತಡಕ್ಕೆ ಸಿಲುಕದೆ ನೆಮ್ಮದಿಯಿಂದ ಪರೀಕ್ಷೆ ಬರೆಯಬೇಕು. ಇಂತಹ ವಾತಾವರಣ ನಿರ್ಮಾಣ ಮಾಡಬೇಕೆಂದು ಖಾಸಗಿ ಶಾಲೆಗಳಲ್ಲಿ ಮನವಿ ಮಾಡುತ್ತೇನೆ. ಹೆತ್ತವರೂ ವಿದ್ಯಾರ್ಥಿಗಳ ಭವಿಷ್ಯವನ್ನು ಆಲೋಚನೆ ಮಾಡಿ ಪರೀಕ್ಷೆ ಬರೆಯಲು ಪ್ರೋತ್ಸಾಹ ಕೊಡಬೇಕು ಎಂದರು.

ಹಿಜಾಬ್ ಬಗ್ಗೆ ಹೈಕೋರ್ಟ್ ಆದೇಶದನ್ವಯ ಸರಕಾರ ಆದೇಶ ಮಾಡಿದೆ. ಆದ್ದರಿಂದ ಯಾವುದೇ ವಿದ್ಯಾರ್ಥಿಗಳು ಕಾನೂನು ಹಾಗೂ ಸರಕಾರದ ಜೊತೆಯಲ್ಲಿ ಸಂಘರ್ಷಕ್ಕೆ ಇಳಿಯಬಾರದು. ಹಿಜಾಬ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.‌ ಅಲ್ಲಿ ನ್ಯಾಯ ದೊರೆಯಬಹುದೆಂಬ ನಂಬಿಕೆಯಿದೆ ಎಂದು ಯು.ಟಿ.ಖಾದರ್ ಹೇಳಿದರು.

Edited By :
PublicNext

PublicNext

27/03/2022 02:45 pm

Cinque Terre

51.19 K

Cinque Terre

8