ಉಡುಪಿ: ಉಡುಪಿಯ ಹಿಜಾಬ್ ಹೋರಾಟಗಾರ್ತಿಯರ ಅಂತಿಮ ಕ್ಷಣದ ಹೋರಾಟ ವಿಫಲವಾಗಿದೆ .ಇವತ್ತು ಪಿಯುಸಿ ಅಂತಿಮ ಪರೀಕ್ಷೆ ಹಿನ್ನೆಲೆಯಲ್ಲಿ ಇಬ್ಬರು ಹೋರಾಟಗಾರ್ತಿಯರು ಕೊನೆ ಕ್ಷಣಕ್ಕೆ ಹಾಲ್ ಟಿಕೆಟ್ ಸಂಗ್ರಹಿಸಲು ಬಂದಿದ್ದಾರೆ.
ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಿಂದ ಹಾಲ್ ಟಿಕೆಟ್ ಪಡೆದುಕೊಂಡ ವಿದ್ಯಾರ್ಥಿನಿಯರಾದ ಅಲಿಯಾ ಮತ್ತು ರೇಷಂ ಪಕ್ಕದ ವಿದ್ಯೋದಯ ಪರೀಕ್ಷಾ ಕೇಂದ್ರಕ್ಕೆ ಹೋಗಿದ್ದಾರೆ. ಅಲ್ಲಿ ತಮಗೆ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ಕಾಲೇಜಿನ ಆಡಳಿತ ಮಂಡಳಿ ಇದಕ್ಕೆ ಅವಕಾಶ ನಿರಾಕರಿಸಿದೆ. ಸುಮಾರು ಅರ್ಧ ಗಂಟೆ ಕಾಲ ಪರೀಕ್ಷಾ ಕೇಂದ್ರದಲ್ಲಿದ್ದ ಇಬ್ಬರು ಹಿಜಾಬ್‌ಧಾರಿ ವಿದ್ಯಾರ್ಥಿನಿಯರು 10:45 ರ ಹೊತ್ತಿಗೆ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸಾದರು. ಈ ವೇಳೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ವಿದ್ಯೋದಯ ಕಾಲೇಜಿಗೆ ಉಡುಪಿ ತಹಶೀಲ್ದಾರ್ ಅರ್ಚನಾ ಭಟ್ ಮತ್ತು ಉಡುಪಿ ನಗರ ಪೊಲೀಸರು ಆಗಮಿಸಿದ್ದರು. ಉಳಿದಂತೆ ಜಿಲ್ಲೆಯಾದ್ಯಂತ ಪಿಯುಸಿ ಅಂತಿಮ ಪರೀಕ್ಷೆಗಳು ಶಾಂತವಾಗಿ ನಡೆಯುತ್ತಿವೆ
PublicNext
22/04/2022 01:16 pm