ಮಂಗಳೂರು: ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಯಾರೂ ಹೆಚ್ಚು ಒಲವು ತೋರದ ಹಿನ್ನೆಲೆಯಲ್ಲಿ ಜೂನ್ 4ರಂದು ಮಧ್ಯಾಹ್ನ 1 - 5 ಗಂಟೆಯವರೆಗೆ ನಗರದ ಪುರಭವನದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗೆ ಮಂಗಳೂರು ಪೊಲೀಸರಿಂದ ಕಾರ್ಯಾಗಾರ ನಡೆಯಲಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್ ಹೇಳಿದರು.
ಮಾಧ್ಯಮ ಪ್ರಕಟನೆ ನೀಡಿದ ಅವರು, ಸರಕಾರಿ ಉದ್ಯೋಗದ ಬಗ್ಗೆ ಜಾಗೃತಿ ಇಲ್ಲದಿರುವುದು, ಸೂಕ್ತ ಸಲಹೆ ದೊರಕದಿರುವುದು, ಪರೀಕ್ಷೆಗೆ ತಯಾರಾಗುವ ಬಗ್ಗೆ ಜ್ಞಾನ ಇಲ್ಲದಿರುವುದೇ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ ನಮ್ಮ ಜನಸ್ನೇಹಿ ಪೊಲೀಸ್ ತಂಡ ಶಾಲಾ - ಕಾಲೇಜುಗಳಲ್ಲಿ ಈ ಬಗ್ಗೆ ಮಾಹಿತಿ ಪಡೆಯಲಾಗಿದೆ.
ಸದ್ಯ ಪರೀಕ್ಷಾ ಆಕಾಂಕ್ಷಿಗಳಿಗೆ ಕಾರ್ಯಾಗಾರ ನಡೆಸಲಾಗುತ್ತದೆ. ಈ ಕಾರ್ಯಾಗಾರದಲ್ಲಿ ನುರಿತ ತಜ್ಞರು ಮಾಹಿತಿ ನೀಡಲಿದ್ದಾರೆ.
ಕಾರ್ಯಾಗಾರದಲ್ಲಿ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವವರು, ಪೋಷಕರೂ ಭಾಗವಹಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಹೇಳಿದರು.
Kshetra Samachara
03/06/2022 08:49 pm