ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: ಹಿಜಾಬ್ ನಿಷೇಧದ ಹಿನ್ನೆಲೆ: ಕಾಲೇಜು ತೊರೆದು ಕಂಪ್ಯೂಟರ್, ಟೈಲರಿಂಗ್ ಕಲಿಕೆ

ಮಂಗಳೂರು: ಮಂಗಳೂರು ನಗರದ ಹೊರವಲಯದ ಹಳೆಯಂಗಡಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ನಿರ್ಬಂಧದಿಂದ 20 ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗಿರುವುದು ಬೆಳಕಿಗೆ ಬಂದಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯ ಕಾರಣ ಮುಂದಿಟ್ಟು ಹಿಜಾಬ್ ಧಾರಿ ವಿದ್ಯಾರ್ಥಿನಿಯರು ತರಗತಿಗೆ ಪ್ರವೇಶಿಸುವುದಕ್ಕೆ ಅವಕಾಶ ನಿರಾಕರಿಸಲಾಗಿದೆ. ಆ ಮೂಲಕ ಪ್ರಾಂಶುಪಾಲರು ಯಾರದೋ ಒತ್ತಡಕ್ಕೆ ಮಣಿದು ತಮ್ಮ ಶೈಕ್ಷಣಿಕ ಜೀವನಕ್ಕೆ ಕೊಳ್ಳಿ ಇಟ್ಟಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ನಮ್ಮ ಕಾಲೇಜಿನಲ್ಲಿ ಹಿಜಾಬ್ ವಿಚಾರವಾಗಿ ಯಾವುದೇ ಗೊಂದಲ ಉಂಟಾಗಿರಲಿಲ್ಲ. ಆದರೆ ಇತ್ತೀಚೆಗೆ ಪ್ರಾಂಶುಪಾಲರು ಹಿಜಾಬ್ ಧರಿಸಿ ಬರುವುದಾದರೆ ಕಾಲೇಜಿಗೆ ಬರಬೇಡಿ ಎಂದು ಹೇಳಿದ್ದಾರೆ. ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ್ದಾರೆ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.

ಪ್ರಾಂಶುಪಾಲರು ಮತ್ತು ಕಾಲೇಜು ಆಡಳಿತ ಸಮಿತಿಯ ಕೆಲವರಿಂದಾಗಿ ಈ ಸಮಸ್ಯೆ ಸೃಷ್ಟಿಯಾಗಿದೆ. ಇದರಿಂದ 20 ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗುವಂತಾಗಿದೆ ಎಂದು ವಿದ್ಯಾರ್ಥಿನಿಯರ ಪೋಷಕರು ಆರೋಪಿಸಿದ್ದಾರೆ. ಹಿಜಾಬ್ ಕಾರಣಕ್ಕೆ ತರಗತಿ ಪ್ರವೇಶ ನಿರಾಕರಿಸಲ್ಪಟ್ಟ 20 ವಿದ್ಯಾರ್ಥಿನಿಯರ ಪೈಕಿ ಕೆಲವರು ಬಳಿಕ ಕಾಲೇಜು ತೊರೆಯಲು ನಿರ್ಧರಿಸಿದ್ದಾರೆ. ಕೆಲವರು ವಿದ್ಯಾರ್ಥಿನಿಯರು ಟೈಲರಿಂಗ್, ಕಂಪ್ಯೂಟರ್ ಕಲಿಯಲು ತೆರಳುತ್ತಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

16/06/2022 08:53 pm

Cinque Terre

10.62 K

Cinque Terre

13

ಸಂಬಂಧಿತ ಸುದ್ದಿ