ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಶಾಲಾ - ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆ ಮುಂದುವರಿಕೆ

ಮಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ಗೊಂದಲದ ಹಿನ್ನೆಲೆ ಶಾಂತಿ ಕಾಪಾಡುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ, ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳ 200 ಮೀ. ವ್ಯಾಪ್ತಿಯ ಸುತ್ತಮುತ್ತ ಸೆ.144ರನ್ವಯ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಮಾ.16ರವರೆಗೆ ವಿಸ್ತರಿಸಲಾಗಿದೆ. ಸೆಕ್ಷನ್ 144ರನ್ವಯ ಫೆ.28ರಿಂದ ಮಾ.5ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ಆ ನಿಷೇಧಾಜ್ಞೆಯನ್ನು ಮಾ.16ರ ಸಂಜೆ 6ರವರೆಗೆ ವಿಸ್ತರಿಸಿ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಮಾ.12ರಿಂದ 16ರವರೆಗೆ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರದ ಸಂತ ಅಲೋಶಿಯಸ್ ಕಾಲೇಜು, ಬೆಸೆಂಟ್ ಪಿಯು ಕಾಲೇಜು, ಬಲ್ಮಠ ಮಹಿಳಾ ಪಿಯು ಕಾಲೇಜು, ಕೆನರಾ ಪಿಯು ಕಾಲೇಜು ಹಾಗೂ ರಥಬೀದಿಯ ಸರಕಾರಿ ಪಿಯು ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಪ್ರಕಟನೆ ತಿಳಿಸಿದೆ.

Edited By : Nirmala Aralikatti
Kshetra Samachara

Kshetra Samachara

09/03/2022 10:15 pm

Cinque Terre

5.35 K

Cinque Terre

0

ಸಂಬಂಧಿತ ಸುದ್ದಿ