ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಕರ್ತವ್ಯ ಲೋಪ ಆರೋಪ ಸಾಬೀತು; ಶಿರಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

ಶಿರಾಡಿ: ಶಿರಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಅವರನ್ನು ಗ್ರಾಮ ಪಂಚಾಯಿತಿ ಲೆಕ್ಕ ಪತ್ರಗಳ ನಿರ್ವಹಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು, ಶಿಷ್ಟಾಚಾರ ಪಾಲಿಸದಿರುವುದು ಮತ್ತು ಕರ್ತವ್ಯಲೋಪ ಎಸಗಿರುವ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ವೆಂಕಟೇಶ್ ನಡೆಸಿರುವ ಅವ್ಯವಹಾರಗಳ ಬಗ್ಗೆ ಗ್ರಾಮಸ್ಥರು ಸೇರಿ ಹಲವರಿಂದ ಹಲವಾರು ದೂರುಗಳು ಸಲ್ಲಿಕೆಯಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ಪ್ರತ್ಯೇಕ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತನಿಖಾ ತಂಡವು ದೂರು ಅರ್ಜಿಗಳಲ್ಲಿನ ಅಂಶಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ತನಿಖಾ ವರದಿಯನ್ನು ಸಲ್ಲಿಸಿದ್ದು, ಸದರಿ ತನಿಖಾ ವರದಿಯಲ್ಲಿ ಪಿ.ಡಿ.ಒ ವೆಂಕಟೇಶ್ ಕರ್ತವ್ಯಲೋಪ ಎಸಗಿರುವುದು ಕಂಡು ಬಂದಿದೆ. ಹಲವು ಆರೋಪಗಳು ಪಿ.ಡಿ.ಒ ವೆಂಕಟೇಶ್ ಮೇಲೆ ಸಾಬೀತು ಆಗಿದೆ.ಈ ಹಿನ್ನಲೆಯಲ್ಲಿ ಆರೋಪಗಳ ಕುರಿತು ವಿವರವಾದ ವಿಚಾರಣೆ ನಡೆಸುವ ಸಲುವಾಗಿ ಇದೀಗ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ , ಇವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.

Edited By : Vijay Kumar
Kshetra Samachara

Kshetra Samachara

08/06/2022 09:38 am

Cinque Terre

4.59 K

Cinque Terre

0

ಸಂಬಂಧಿತ ಸುದ್ದಿ