ಮಂಗಳೂರು: ಕಳೆದ 2ವರ್ಷಗಳಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿಯಾಗಿ ಕರ್ತವ್ಯದಲ್ಲಿದ್ದ ಹರಿರಾಂ ಶಂಕರ್ ಅವರು ಹಾಸನ ಎಸ್‌ಪಿಯಾಗಿ ವರ್ಗಾವಣೆಗೊಂಡಿದ್ದಾರೆ.
ಜನಾನುರಾಗಿ ಪೊಲೀಸ್ ಅಧಿಕಾರಿಯೆಂಬ ಹೆಗ್ಗಳಿಕೆ ಪಡೆದಿದ್ದ ಹರಿರಾಂ ಶಂಕರ್ ಅವರು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ನೇತೃತ್ವದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡವಲ್ಲಿ ಜೊತೆಯಾಗಿ ಕಾರ್ಯ ನಿರ್ವಹಿಸಿದ್ದರು. ಮಾದಕದ್ರವ್ಯ ವಿರೋಧಿ ಕಾರ್ಯಾಚರಣೆಯಲ್ಲಿಯೂ ಸಾಕಷ್ಟು ಕಾರ್ಯಪ್ರವೃತ್ತರಾಗಿದ್ದರು.
Kshetra Samachara
27/06/2022 10:15 pm