ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಪ್ರವೀಣ್ ಹತ್ಯೆ ಬೆನ್ನಲ್ಲೇ ಪೊಲೀಸರ ಸಾಮೂಹಿಕ ವರ್ಗಾವಣೆ: ಬೆಳ್ಳಾರೆ, ಸುಬ್ರಹ್ಮಣ್ಯ ಎಸ್‌ಐಗಳ ವರ್ಗ

ಸುಳ್ಯ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳನ್ನು ಸಾಮೂಹಿಕ ವರ್ಗಾವಣೆ ಮಾಡಲಾಗಿದೆ. ಬೆಳ್ಳಾರೆ ಉಪ ನಿರೀಕ್ಷಕ ರುಕ್ಮ ನಾಯ್ಕ್, ಸುಬ್ರಹ್ಮಣ್ಯ ಎಸ್ಐ ಜಂಬೂರಾಜ್ ಮಹಾಜನ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಬೆಳ್ಳಾರೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಬಾಲಕೃಷ್ಣ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕುಂದಾಪುರ ಪೊಲೀಸ್ ಠಾಣೆಯ ಎಸ್ಐ ಸುಹಾಸ್ ಆರ್. ಅವರನ್ನು ಬೆಳ್ಳಾರೆ ಠಾಣೆಗೆ ಹಾಗು ವಿಟ್ಲ ಠಾಣೆಯ ಎಸ್ಐ ಮಂಜುನಾಥ್ ಟಿ ಅವರನ್ನು ಸುಬ್ರಹ್ಮಣ್ಯ ಎಸ್ಐ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ರುಕ್ಮ ನಾಯ್ಕ್, ಜಂಬೂರಾಜ್ ಮಹಾಜನ್ ಅವರನ್ನು ಎಸ್‌ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದ್ದು ನಿರ್ದಿಷ್ಠ ಠಾಣೆಗೆ ತೋರಿಸಿಲ್ಲ. ವಾರದ ಅವಧಿಯಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮತ್ತು ಕಳಂಜದಲ್ಲಿ ಮಸೂದ್ ಎಂಬ ಯುವಕನ ಕೊಲೆ ಪ್ರಕರಣ ನಡೆದಿತ್ತು.ಇದರ ಹಿನ್ನಲೆಯಲ್ಲಿ ಬೆಳ್ಳಾರೆಯಲ್ಲಿ ಪ್ರಕ್ಷುಬ್ದ ವಾತಾರಣ ನಿರ್ಮಾಣವಾಗಿತ್ತು. ಇದರ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ವರ್ಗಾವಣೆಯಾಗಿದೆ.

Edited By : Vijay Kumar
Kshetra Samachara

Kshetra Samachara

29/07/2022 11:13 pm

Cinque Terre

7.82 K

Cinque Terre

1

ಸಂಬಂಧಿತ ಸುದ್ದಿ