ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮತ್ತೆ ಎರಡು ದಿನ ದ.ಕ ಜಿಲ್ಲಾದ್ಯಂತ ನಿಷೇಧಾಜ್ಞೆ ಮುಂದುವರಿಕೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಹತ್ಯೆ ಪ್ರಕರಣ ನಡೆದ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ರಾತ್ರಿ ನಿಷೇಧಾಜ್ಞೆಯನ್ನು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮತ್ತೆ ಎರಡು ದಿನ ರಾತ್ರಿ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಸಂಜೆ 6ರಿಂದ ಮುಂಜಾನೆ 6ರವರೆಗೆ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿತ್ತು. ಇದೀಗ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಮನವಿಯ ಮೇರೆಗೆ ಜಿಲ್ಲಾದ್ಯಂತ ಎರಡು ದಿನ ರಾತ್ರಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಇನ್ನು 144 ಸೆಕ್ಷನ್ ಅನ್ನು ಆಗಸ್ಟ್ ಆರರವರೆಗೆ ವಿಸ್ತರಿಸಲಾಗಿತ್ತು.

ಹಾಗೆಯೇ ಮದ್ಯ ಮಾರಾಟ ಮತ್ತು ಸಾಗಾಟ ನಿಷೇಧದ ಆದೇಶವನ್ನು ಇನ್ನೂ ಎರಡು ದಿನ ವಿಸ್ತರಿಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

31/07/2022 08:40 pm

Cinque Terre

7.48 K

Cinque Terre

0

ಸಂಬಂಧಿತ ಸುದ್ದಿ