ಸುಳ್ಯ: ಹತ್ಯೆಯಾದ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಪ್ರಕರಣದ ಅಪರಾಧಿಗಳಿಗೆ ಸರಿಯಾದ ಶಿಕ್ಷೆ ಆಗಬೇಕು. ಜೊತೆಗೆ ಕಾನೂನುಗಳು ಕೂಡ ಕಠಿಣ ಆಗಬೇಕು ಎಂದು ಹೇಳಿದರು. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಈ ವೇಳೆ ಕೆ.ಎಂ.ಎಫ್ ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ, ಪ್ರಮುಖರಾದ ಶ್ರೀನಾಥ್ ಬಾಳಿಲ, ಶುಭಾಶ್ಚಂದ್ರ ಕಳಂಜ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
02/08/2022 10:58 am