ಉಡುಪಿ: ನಗರದ ಬ್ರಹ್ಮಗಿರಿ ವೃತ್ತದಲ್ಲಿ ಹಿಂದೂ ರಾಷ್ಟ್ರದ ಹೆಸರಿನ ಫ್ಲೆಕ್ಸ್ ಅಳವಡಿಕೆ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಬ್ರಹ್ಮಗಿರಿ ವೃತ್ತದಲ್ಲಿ ಹೆಚ್ಚಿನ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದ್ದು ,ನಿನ್ನ ಇಲ್ಲಿ ಸಾವರ್ಕರ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಭಾವಚಿತ್ರವಿರುವ ಫ್ಲೆಕ್ಸ್ ಹಾಕಲಾಗಿತ್ತು.ಫ್ಲೆಕ್ಸ್ ನಲ್ಲಿ ಜೈ ಹಿಂದೂ ರಾಷ್ಟ್ರ ಎಂಬ ಬರಹ ಇದ್ದ ಹಿನ್ನೆಲೆಯಲ್ಲಿ ಇದನ್ನು ತೆರವುಗೊಳಿಸಬೇಕು ಎಂದು ಪಿಎಫ್‌ಐ ಪೊಲೀಸರಲ್ಲಿ ಮನವಿ ಸಲ್ಲಿಸಿತ್ತು, ಆದರೆ ಫ್ಲೆಕ್ಸ್ ನ್ನು ಇನ್ನೂ ತೆರವುಗೊಳಿಸಿಲ್ಲ, ಮೂರು ದಿನಗಳ ಕಾಲ ಉಡುಪಿ ನಗರಸಭೆ ಫ್ಲೆಕ್ಸ್ ಅಳವಡಿಸಲು ಅನುಮತಿ ನೀಡಿದೆ ಎನ್ನಲಾಗಿದೆ, ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.
Kshetra Samachara
16/08/2022 04:24 pm