ಮಂಗಳೂರು: ಗಣೇಶೋತ್ಸವ ಆಚರಣೆಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ದ.ಕ.ಜಿಲ್ಲಾಡಳಿತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಕೆ ಮಾಡದಿರುವಂತೆ ಎಂದು ಮನವಿ ಮಾಡಿದೆ.
ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಮಾರ್ಗಸೂಚಿಯನ್ನು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿ ಹಬ್ಬವಾಗಿ ಆಚರಿಸಿ. ಜೇಡಿ ಮಣ್ಣಿನ ಗೌರಿ ಹಾಗೂ ಗಣೇಶ ಮೂರ್ತಿಗಳನ್ನು ಪೂಜಿಸಿ ಸರಳವಾಗಿ ಆಚರಣೆ ಮಾಡಿ. ಪೂಜೆಯ ಬಳಿಕ ಮೂರ್ತಿಗಳನ್ನು ಮನೆಯಲ್ಲಿಯೇ ವಿಸರ್ಜಿಸಿ ಪರಿಸರ ಮಾಲಿನ್ಯವನ್ನು ನಿಯಂತ್ರಿಸುವಂತೆ ಮನವಿ ಮಾಡಿದ್ದಾರೆ.
ಪರಿಸರದ ಮೇಲೆ ಭಾರೀ ಪರಿಣಾಮ ಬೀರುವಂತಹ ಪಿಒಪಿಯಿಂದ ತಯಾರಿಸಿರುವ ಹಾಗೂ ರಾಸಾಯನಿಕ ಬಣ್ಣಗಳನ್ನು ಒಳಗೊಂಡ ಗೌರಿ-ಗಣೇಶ ಮೂರ್ತಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಬ್ಬವನ್ನು ಸರಳವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಿ. ಗಣೇಶೋತ್ಸವ ಸಮಿತಿಗಳು, ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನ್ಸಿಪಲ್ ಕಾರ್ಪೊರೇಷನ್ ಅಥವಾ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು. ಹಬ್ಬದ ವೇಳೆ ಪಟಾಕಿ ಸಿಡಿಸದಿರುವಂತೆ ರಸ್ತೆ, ಚರಂಡಿಯಲ್ಲಿ ಹೂವಿನ ಹಾರ, ತಟ್ಟೆ, ಲೋಟ, ಎಲೆ ಎಸೆಯದಿರುವಂತೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದ್ದಾರೆ.
Kshetra Samachara
30/08/2022 09:52 pm