ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಪೌರಕಾರ್ಮಿಕರ ಸೇವೆ ಖಾಯಂಗೊಳಿಸುವ ಬಗ್ಗೆ ಶೀಘ್ರ ಕ್ರಮ: ಸುಭಾಷ್ ಶೆಟ್ಟಿ

ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವತಿಯಿಂದ ಪೌರಕಾರ್ಮಿಕರ ದಿನಾಚರಣೆ, ನಗರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ ವಹಿಸಿ ಮಾತನಾಡಿ, ಪೌರ ಕಾರ್ಮಿಕರು ಊರಿನ ರಾಯಭಾರಿಗಳಾಗಿದ್ದು, ನಗರದ ಸ್ವಚ್ಛತೆ ಹಾಗೂ ಸುಂದರೀಕರಣಕ್ಕೆ ಅವರ ನಿಸ್ವಾರ್ಥ ಸೇವೆಯೇ ಕಾರಣ. ಮುಂದಿನ ದಿನಗಳಲ್ಲಿ ಪೌರಕಾರ್ಮಿಕರ ಸೇವೆ ಖಾಯಂಗೊಳಿಸುವ ಬಗ್ಗೆ ಶಾಸಕರ ಜೊತೆ ಚರ್ಚಿಸಲಾಗಿದೆ ಎಂದರು.

ಮುಖ್ಯಾಧಿಕಾರಿ ಚಂದ್ರ ಪೂಜಾರಿ ಮಾತನಾಡಿ, ಪೌರಕಾರ್ಮಿಕರಿಗೆ ಸಂಕಷ್ಟ ಭತ್ಯೆ, ವಿಮಾ ಯೋಜನೆ, ಸ್ವಚ್ಛತಾ ಪರಿಕರಗಳನ್ನು ನೀಡುವ ಕಾರ್ಯ ಪ್ರಗತಿಯಲ್ಲಿದ್ದು ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ನ.ಪಂ. ಮುಖ್ಯಾಧಿಕಾರಿ ಡಾ. ಹರಿಶ್ಚಂದ್ರ ಸಾಲ್ಯಾನ್ ಮಾತನಾಡಿ, ಪೌರಕಾರ್ಮಿಕರು ತಮ್ಮ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಭದ್ರತೆ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ನ. ಪಂ. ಉಪಾಧ್ಯಕ್ಷ ಸತೀಶ್ ಅಂಚನ್, ಸದಸ್ಯರಾದ ಪುತ್ತುಭಾವ, ಯೋಗೀಶ್ ಕೋಟ್ಯಾನ್, ಮಂಜುನಾಥ್ ಕಂಬಾರ, ಶೈಲೇಶ್ ಕುಮಾರ್, ವಂದನಾ ಕಾಮತ್, ರಾಧಿಕಾ ಕೋಟ್ಯಾನ್, ದಯಾವತಿ ಅಂಚನ್, ಬಾಲಚಂದ್ರ ಕಾಮತ್,ಸಂತೋಷ್ ದೇಸುಣಿಗಿ, ಈರಣ್ಣ ಅರಳಗುಂಡಿ,ಮುಖ್ಯಾಧಿಕಾರಿ ಚಂದ್ರ ಪೂಜಾರಿ, ಕಂದಾಯ ಅಧಿಕಾರಿ ಅಶೋಕ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಆಯೋಜಿಸಲಾಗಿದ್ದ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Edited By : Somashekar
Kshetra Samachara

Kshetra Samachara

23/09/2022 01:26 pm

Cinque Terre

9.13 K

Cinque Terre

0

ಸಂಬಂಧಿತ ಸುದ್ದಿ