ಉಡುಪಿ: ವೀರಶೈವ -ಲಿಂಗಾಯುತ ಸಮುದಾಯವನ್ನು ಕೇಂದ್ರ ಸರಕಾರದ ಇತರೆ ಹಿಂದುಳಿದ ವರ್ಗಗಳ(ಓಬಿಸಿ) ಪಟ್ಟಿಯಲ್ಲಿ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಬಳಿಕ ಈ ಕುರಿತ ಮನವಿಯನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು. ಕಳೆದ 60 ವರ್ಷಗಳಿಂದ ವೀರಶೈವ- ಲಿಂಗಾಯುತ ಸಮುದಾಯವನ್ನು ಇತರೇ ಹಿಂದುಳಿದವರ್ಗ ಎಂದು ಪರಿಗಣಿಸಲಾಗಿದ್ದರೂ ಕೇಂದ್ರ ಸರಕಾರದ ಓಬಿಸಿ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವುದರಿಂದ ಕೇಂದ್ರ ಸರಕಾರದಿಂದ ದೊರೆಯುವ ಸೌಕರ್ಯಗಳಿಂದ ವಂಚಿತವಾಗಿದೆ. ಓಬಿಸಿ ಪಟ್ಟಿಯಲ್ಲಿ ಸೇರದೆ ಇರುವ ಕಾರಣ ನಮ್ಮ ಸಮುದಾಯದ ಜನರು ದಶಕಗಳಿಂದ ಕೇಂದ್ರ ಸರಕಾರದ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತು ಕೇಂದ್ರ ನೇಮಕಾತಿ ಅವಕಾಶಗಳಿಂದ ವಂಚಿತರಾಗಿದ್ದರು. ಆದುದರಿಂದ ಎಲ್ಲ ಉಪಪಂಗಡಗಳನ್ನೂ ಒಳಗೊಂಡಂತೆ ಕೇಂದ್ರ ಸರಕಾರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸುವ ಮೂಲಕ ಸಮುದಾಯಕ್ಕೆ ಸೌಲಭ್ಯ ದೊರೆಯುವಂತೆ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಮುಖಂಡರು ಒತ್ತಾಯಿಸಿದರು.
Kshetra Samachara
02/08/2022 11:15 am