ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಸರಗೋಡು: ಅ. 9ರ ವರೆಗೆ ಸೆ.144 ಜಾರಿ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನ ಸೋಂಕು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅ.2ರ ಮಧ್ಯರಾತ್ರಿಯಿಂ‌ದ‌ ಅ. 9ರ ವರೆಗೆ ಸೆ.144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ.

ಕೇರಳದಾದ್ಯಂತ ಅಕ್ಟೋಬರ್ 31ರ ತನಕ ನಿಷೇಧಾಜ್ಞೆ ಜಾರಿ ಗೊಳಿಸಿ ಆದೇಶಿಸಲಾಗಿದೆ. ಆದರೆ, ಕಾಸರಗೋಡು ಜಿಲ್ಲೆಯಲ್ಲಿ ಒಂದು ವಾರಕ್ಕಷ್ಟೇ ಸೀಮಿತಗೊಳಿಸಿ ಆದೇಶಿಸಿರುವ ಜಿಲ್ಲಾಧಿಕಾರಿಯವರು, ಸೋಂಕು ನಿಯಂತ್ರಣಕ್ಕೆ‌ ಬರದಿದ್ದ ಪಕ್ಷದಲ್ಲಿ ಆದೇಶವನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

ನಿಷೇದಾಜ್ಞೆಯನ್ನು ಕಟ್ಟು ನಿಟ್ಟಾಗಿ ಜಾರಿಗೆ ತರುವಂತೆ ಆದೇಶದಲ್ಲೇ ಜಿಲ್ಲಾಧಿಕಾರಿ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.

Edited By :
Kshetra Samachara

Kshetra Samachara

03/10/2020 11:25 am

Cinque Terre

14.47 K

Cinque Terre

0

ಸಂಬಂಧಿತ ಸುದ್ದಿ