ಮಂಗಳೂರು: ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರಿನಲ್ಲಿ
ನಟಿ, ನಿರೂಪಕಿ ಅನುಶ್ರೀ ವಿಚಾರಣೆ ಮುಕ್ತಾಯಗೊಂಡಿದೆ.
ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದಲ್ಲಿ ಮೂರುವರೆ ಗಂಟೆಗಳ ಸತತ ವಿಚಾರಣೆ ನಡೆಯಿತು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅನುಶ್ರೀ, ತರುಣ್ ರಾಜ್ ನನಗೆ 12 ವರ್ಷಗಳ ಹಿಂದಿನ ಪರಿಚಯ. ತರುಣ್ ರಾಜ್ ನನಗೆ 6 ತಿಂಗಳು ಡ್ಯಾನ್ಸ್ ಕೊರಿಯೋಗ್ರಾಫ್ ಮಾಡಿದ್ದಾರೆ. ಈ ವೇಳೆ ಮಾತ್ರ ತರುಣ್ ರಾಜ್ ಪರಿಚಯವಾಗಿದೆ. ಡ್ರಗ್ಸ್ ಬಗ್ಗೆ ತರುಣ್ ಜೊತೆ ಯಾವುದೇ ಸಂಬಂಧ ಇಲ್ಲ.
ಪೊಲೀಸರು ಇವತ್ತು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮುಂದೆ ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗುತ್ತೇನೆ. ಇವತ್ತು ಮುಂದಿನ ವಿಚಾರಣೆ ಬಗ್ಗೆ ಪೊಲೀಸರು ಏನೂ ಹೇಳಿಲ್ಲ ಎಂದ ಅವರು, ಡ್ರಗ್ ಮಾಫಿಯಾ ರಾಜ್ಯಕ್ಕೆ ಅಂಟಿರುವ ಭೂತ. ಆ ಭೂತವನ್ನು ಹೋಗಲಾಡಿಸಲು ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ನಾವು ಸಹಕಾರ ನೀಡಬೇಕು ಎಂದರು.
Kshetra Samachara
26/09/2020 02:05 pm