ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ವರ್ಗಾವಣೆ ಹಿಂದೆ ಬೇರೆನೇ ಕಾರಣ ಇದೆ. ಈಗ ಪ್ರಚಾರವಾಗುತ್ತಿರುವ ವಿಷಯ ಸತ್ಯಕ್ಕೆ ದೂರ.
ಬಹಳ ವಿಚಾರ ನಮಗೇನೇ ಗೊತ್ತಾಗಲ್ಲ. ಮಾಧ್ಯಮಗಳಲ್ಲಿ ಬಂದ ವಿಚಾರವನ್ನು ನಾವೇ ತನಿಖೆ ಮಾಡಬೇಕಾಗುತ್ತದೆ ಎಂದ ಅವ್ರು, ಯಾವ ಆಫೀಸರ್ ಮೇಲೂ ಒತ್ತಡ ಹೇರಲಾಗಿಲ್ಲ. ಕೇಸ್ ನಲ್ಲಿ ಚೈನ್ ಲಿಂಕ್ ದೊಡ್ಡದಿದೆ. ಈ ಲಿಂಕ್ ಎಲ್ಲಿ ಕೊನೆಯಾಗುತ್ತೋ ಅಲ್ಲಿ ತನಕ ವಿಚಾರಣೆ ಮಾಡುತ್ತೇವೆ.
ಡ್ರಗ್ಸ್ ಪ್ರಕರಣದಲ್ಲಿ ಒಟ್ಟು 6 ಮಂದಿ ಆರೋಪಿಗಳ ಬಂಧನವಾಗಿದೆ. ಈ ಪ್ರಕರಣದ ಬಗ್ಗೆ ಪ್ರತಿನಿತ್ಯ ತನಿಖೆ ಮಾಡಲಾಗುತ್ತಿದೆ. ಮಾಹಿತಿ ಬೇಕಾದಲ್ಲಿ ನೋಟಿಸ್ ಮಾಡುತ್ತೇವೆ. ನೋಟಿಸ್ ಕೊಟ್ಟು ಪ್ರಕರಣದ ವಿಚಾರಣೆ ಮಾಡುತ್ತೇವೆ
ಎಂದರು.
Kshetra Samachara
03/10/2020 02:03 pm