ಮಂಗಳೂರು: ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ರೈ ತ ವಿರೋಧಿ ಮಸೂದೆ ಖಂಡಿಸಿ, ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರಲ್ಲಿ ದೊಂದಿ ಬೆಳಕಿನ ಪ್ರತಿಭಟನೆ ನಡೆಯಿತು.
ಪ್ರತಿಭಟನೆಗೆ ಅನುಮತಿಯಿಲ್ಲದ ಕಾರಣ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದ ಸಂದರ್ಭ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಕಾರಣ ಕಾಂಗ್ರೆಸ್ ಮುಖಂಡರು ಹಾಗೂ ಪ್ರತಿಭಟನಾನಿರತ ಕಾರ್ಯಕರ್ತರನ್ನು ಬಂಧಿಸಿದ್ದ ಪೊಲೀಸರು, ಇದೀಗ ಅವರನ್ನು ಬಿಡುಗಡೆಗೊಳಿಸಿದ್ದಾರೆ.
Kshetra Samachara
25/09/2020 08:54 pm