ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಕೇಂದ್ರ ಮಾರುಕಟ್ಟೆ ಸ್ಥಳಾಂತರದ ತಪ್ಪು ನಿರ್ಧಾರದಿಂದಾಗಿ ಮನಪಾಗೆ 1 ಕೋಟಿ ರೂ. ಆದಾಯ ಖೋತಾ!"

ಮಂಗಳೂರು: ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಗೆ ಸಂಬಂಧಿಸಿ ಕೊರೊನಾ ನೆಪದಲ್ಲಿ ಜಿಲ್ಲಾಡಳಿತ ತೆಗೆದುಕೊಂಡ ತಪ್ಪು ನಿರ್ಧಾರದಿಂದ ವ್ಯಾಪಾರಸ್ಥರು ಕಂಗಲಾಗಿದ್ದಾರೆ ಹಾಗೂ ಮನಪಾಗೆ ಕೇಂದ್ರ ಮಾರುಕಟ್ಟೆಯಿಂದ ಬರುತ್ತಿದ್ದ ಅದಾಯ ನಿಂತು ಹೋಗಿದೆ ಎಂದು ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್ ಆಪಾದಿಸಿದ್ದಾರೆ.

ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಮಹಾನಗರ ಪಾಲಿಕೆಗೆ ಬರುತ್ತಿದ್ದ ಹಣ ನಿಂತು ಹೋಗಿದೆ. ಅಲ್ಲಿದ್ದ 450 ಅಧಿಕ ವ್ಯಾಪಾರಸ್ಥರು ಹಾಗೂ ಕೇಂದ್ರ ಮಾರುಕಟ್ಟೆಯಲ್ಲಿ ಕೂಲಿ ಸೇರಿದಂತೆ ನಾನಾ ರೀತಿಯಲ್ಲಿ ಅವಲಂಬಿಸಿಕೊಂಡಿದ್ದ ಸುಮಾರು 500 ಮಂದಿ ಬೀದಿ ಪಾಲಾಗಿದ್ದಾರೆ.

ಯಾವುದೇ ಪೂರ್ವ ತಯಾರಿ ಇಲ್ಲದೆ, ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಕೇಂದ್ರ ಮಾರುಕಟ್ಟೆಯನ್ನು ಬಂದ್ ಮಾಡಲಾಯಿತು. ಅಲ್ಲಿದ್ದ ವ್ಯಾಪಾರಿಗಳನ್ನು ಯಾವುದೇ ಸಮರ್ಪಕ ವ್ಯವಸ್ಥೆ ಮಾಡದೆ ಎಪಿಎಂಸಿಗೆ ಸ್ಥಳಾಂತರ ಮಾಡಿದರು. ಇದರಿಂದಾಗಿ ಮನಪಾಗೆ ಕೇಂದ್ರ ಮಾರುಕಟ್ಟೆ ವ್ಯಾಪಾರಿಗಳಿಂದ ಬರುತ್ತಿದ್ದ 1 ಕೋಟಿ ಆದಾಯ ನಿಂತು ಹೋಗಿದೆ ಎಂದು ಆರೋಪಿಸಿದರು.

Edited By :
Kshetra Samachara

Kshetra Samachara

06/10/2020 05:24 pm

Cinque Terre

37.66 K

Cinque Terre

0