ಉಡುಪಿ : ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅವಶ್ಯಕತೆ ಇರುವ ಶಾಲೆಗಳಿಗೆ ರಜೆ ಘೋಷಿಸಲು ಶಾಲಾ ಮುಖ್ಯಸ್ಥರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ತಿಳಿಸಿದ್ದಾರೆ. ಮಳೆಯಿಂದಾಗಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಶಿಕ್ಷಣ ಇಲಾಖೆಯಿಂದ ಮಾಹಿತಿ ಪಡೆದು, ತೀರ್ಮಾನ ತೆಗೆದುಕೊಳ್ಳಲಿದ್ದೇವೆ.
ವಿದ್ಯಾರ್ಥಿಗಳು ಶಾಲೆಗೆ ತೆರಳಲು ಮಳೆಯಿಂದ ಅಪಾಯ ಎದುರಾಗಲಿರುವ ಕಡೆ ಶಾಲೆಗಳಿಗೆ ರಜೆ ಘೋಷಿಸಲು ಆಯಾ ಶಾಲಾ ಮುಖ್ಯಸ್ಥರಿಗೆ ಅಧಿಕಾರ ನೀಡಿದ್ದೇನೆ. ಇವತ್ತು ಪಡುಬಿದ್ರೆಯ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆಗೆ ಮಾತುಕತೆ ನಡೆಸಿ, ಮಳೆಯ ಸಂದರ್ಭದಲ್ಲಿ ಕೈಗೊಂಡಿರುವ ಮುಂಜಾಗೃತಾ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ಮಳೆ ಮುಂದುವರಿದು ಪ್ರವಾಹ ಸ್ಥಿತಿ ಬಂದಿಲ್ಲಿ ತುರ್ತು ವ್ಯವಸ್ಥೆಗಳನ್ನು ಮಾಡಲಾಗಿದೆ. ಜಿಲ್ಲಾಡಳಿತ ಎಲ್ಲ ಮುನ್ನೆಚ್ಚರಿಕೆ ಕೈಗೊಂಡಿದೆ. ಸಾರ್ವಜನಿಕರು ಜಾಗೃತರಾಗಿ ಸಹಕರಿಸಬೇಕು ಎಂದು ಹೇಳಿದರು.
Kshetra Samachara
30/06/2022 08:10 pm