ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಲೋಕ ಅದಾಲತ್ ಸದುಪಯೋಗ ಪಡೆದುಕೊಳ್ಳಿ; ಪಬ್ಲಿಕ್ ನೆಕ್ಸ್ಟ್ ಮೂಲಕ ನ್ಯಾಯಾಧೀಶರ ಮನವಿ

ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ ತ್ವರಿತ ನ್ಯಾಯಕ್ಕಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣದಲ್ಲಿ ಆಗಸ್ಟ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ನಡೆಯಲಿದೆ.

ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶ.

ಈ ಸಂಬಂಧ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿರುವ ನ್ಯಾಯಾಧೀಶರು ,ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ತ್ವರಿತ ನ್ಯಾಯದ ಜೊತೆಗೆ ಸಮಯ ಮತ್ತು ಹಣ ಉಳಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Edited By :
PublicNext

PublicNext

20/07/2022 07:05 pm

Cinque Terre

52.67 K

Cinque Terre

0

ಸಂಬಂಧಿತ ಸುದ್ದಿ