ಉಡುಪಿ: ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪು ನಮಗೆ ತೃಪ್ತಿಕರವಾಗಿಲ್ಲ. ಆದರೂ ತೀರ್ಪನ್ನು ಗೌರವಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ ಹೇಳಿದ್ದಾರೆ.
ಹಿಜಾಬ್ ನಮ್ಮ ಸಮುದಾಯದ ಹೆಣ್ಣುಮಕ್ಕಳ ಧಾರ್ಮಿಕ ವಸ್ತ್ರವಾಗಿದ್ದು, ಇದನ್ನು ಧರಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಧಾರ್ಮಿಕ, ಸಾಂವಿಧಾನಿಕ ಹಕ್ಕನ್ನು ಪಡೆಯಲು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದ್ದೇವೆ. ಆದರೆ ಹೈಕೋರ್ಟ್ ತೀರ್ಪಿನಿಂದ ಯಾರೂ ಉದ್ವೇಗಕ್ಕೆ ಒಳಗಾಗದೆ ಶಾಂತ ರೀತಿಯಲ್ಲಿ ಇರಬೇಕು ಎಂದು ಅವರು ಮನವಿ ಮಾಡಿದ್ದಾರೆ.
Kshetra Samachara
15/03/2022 10:08 pm