ಮಂಗಳೂರು: ಮಂಗಳೂರು ವಿವಿ ಕಾಲೇಜಿನ ಪದವಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬರುತ್ತಿದ್ದಾರೆ. ಇದು ಸರಕಾರದ ನಿಯಮಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿ ಕೆಲ ವಿದ್ಯಾರ್ಥಿಗಳು ನಗರದ ವಿವಿ ಕಾಲೇಜು ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆಸಿದರು.
ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು ಕಾಲೇಜಿನ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ತರಗತಿಯ ಒಳಗೂ ಹಿಜಾಬ್ ಧರಿಸುತ್ತಿರುವುದಾಗಿ ಆರೋಪಿಸಿ ಪ್ರತಿಭಟನೆ ನಡೆಸಿದರು. ಅಲ್ಲದೆ ಕಾಲೇಜಿನ ವಿದ್ಯಾರ್ಥಿ ನಾಯಕ ವಿನ್ಯಾಸ್ ಈ ಸಮಸ್ಯೆ ಬಗೆಹರಿಸದೆ ಹಿಜಾಬ್ ಪರ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರಲ್ಲದೆ ವಿದ್ಯಾರ್ಥಿ ನಾಯಕನ ರಾಜೀನಾಮೆಗೆ ಆಗ್ರಹಿಸಿದರು.
ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಿಜಾಬ್ ನಿಯಮವನ್ನು ಕಾಲೇಜಿನಲ್ಲಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿದರು.
PublicNext
26/05/2022 03:13 pm