ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್‌ ದಿಢೀರ್‌ ವರ್ಗಾವಣೆ ತಡೆ ಹಿಡಿದ ರಾಜ್ಯ ಸರ್ಕಾರ

ಮಂಗಳೂರು : ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್‌ ಶಿವಪ್ರಕಾಶ್ ನಾಯ್ಕ್ ದಿಢೀರ್‌ ವರ್ಗಾವಣೆ ಆಗಿದ್ದರು, ಆದರೆ ಸಿಸಿಬಿ ಇನ್ಸ್ ಪೆಕ್ಟರ್ ದಿಢೀರ್‌ ವರ್ಗಾವಣೆ ಆದೇಶಕ್ಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು, ನಾಗರೀಕರು ಸರ್ಕಾರದ ವಿರುದ್ಧ ತಿರುಗಿಬಿದ್ದ ಕಾರಣ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯಕ್ ವರ್ಗಾವಣೆ ಆದೇಶವನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.

ಕಿಶೋರ್ ಶೆಟ್ಟಿ, ಅಮನ್ ಶೆಟ್ಟಿ ಯನ್ನು ಪ್ರಕರಣದಿಂದ ಕೈಬಿಡಲು ಶಿವಪ್ರಕಾಶ್‌ ಮೇಲೆ ಒತ್ತಡ ಬಂದಿತ್ತು, ಕರಾವಳಿಯ ಪ್ರಭಾವಿ ಶಾಸಕರು ಬಂಧಿಸದಂತೆ ಒತ್ತಡ ಕೂಡ ಹೇರಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಆದರೆ ರಾಜಕಾರಣಿಯ ಒತ್ತಡಕ್ಕೆ ಮಣಿಯದೇ ಕಿಶೋರ್‌ನನ್ನು ಶಿವಪ್ರಕಾಶ್ ನಾಯ್ಕ್ ಬಂಧಿಸಿದ್ದರು. ಈ ಕಾರಣಕ್ಕೆ ಅವರನ್ನು ದಿಢೀರ್ ವರ್ಗಾವಣೆ ಮಾಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದರ ಬೆನ್ನಲ್ಲೇ, ಇದೀಗ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯಕ್ ಅವರ ವರ್ಗಾವಣೆ ಆದೇಶವನ್ನು ರಾಜ್ಯ ಸರ್ಕಾರ ತಡೆ ಹಿಡಿಡಿದ್ದು, ಇನ್ನುಮುಂದೆ ಸಿಸಿಬಿ ಇನ್ಸ್ ಪೆಕ್ಟರ್ ಆಗಿ ಶಿವಪ್ರಕಾಶ್ ನಾಯಕ್ ಅವರೇ ಮುಂದುವರೆಯಲಿದ್ದಾರೆ ಎನ್ನಲಾಗಿದೆ.

Edited By :
Kshetra Samachara

Kshetra Samachara

03/10/2020 02:04 pm

Cinque Terre

22.24 K

Cinque Terre

4

ಸಂಬಂಧಿತ ಸುದ್ದಿ